ETV Bharat / state

ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ಯುವಕನಿಗೆ 5 ವರ್ಷ ಜೈಲು, ದಂಡ - 1ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್

ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಗಾಯ ಉಂಟುಮಾಡಿದ್ದ ಆರೋಪಿಗೆ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ.

5-years-jail-for-young-man-stabbed-with-a-knife-to-girl
ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ಯುವಕ : 5 ವರ್ಷ ಜೈಲು, ದಂಡ
author img

By

Published : Feb 11, 2022, 8:03 PM IST

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಗಾಯ ಉಂಟುಮಾಡಿದ್ದ ಆರೋಪಿಗೆ ನಗರದ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ. ಅಪರಾಧಿ ಅನಿಲ್ ಕುಮಾರ್ ಅಲಿಯಾಸ್ ರಾಹುಲ್​ನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ನಗರದ 1ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಸುಭಾಷ್ ಬಿ. ಸಂಕದ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತ ಪಾವತಿಸದಿದ್ದಲ್ಲಿ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತಿಳಿಸಿದೆ. ಇದೇ ವೇಳೆ ಗಾಯಾಳುವಿಗೆ 25 ಸಾವಿರ ರೂಪಾಯಿ ಪರಿಹಾರವಾಗಿ ಪಾವತಿಸಲು ಸೂಚಿಸಿರುವ ನ್ಯಾಯಾಲಯ, ಪರಿಹಾರ ಪಾವತಿಸದಿದ್ದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಪರಿಹಾರ ಕೊಡಿಸುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಯಲಹಂಕದ ಅನಿಲ್ ಕುಮಾರ್ 23 ವರ್ಷದ ಸೌಮ್ಯ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಈತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದ್ದಕ್ಕೆ ಸಿಟ್ಟಿಗೆದ್ದ ರಾಹುಲ್ ಯುವತಿಯ ಹೊಟ್ಟೆ, ಕುತ್ತಿಗೆ ಹಾಗೂ ಗಲ್ಲಕ್ಕೆ ಚಾಕುವಿನಿಂದ ಇರಿದಿದ್ದ.

ಈ ಸಂಬಂಧ ಯಲಹಂಕ ಠಾಣೆ ಪೊಲೀಸರು ಅನಿಲ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿ (ಕೊಲೆ ಯತ್ನ) ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆಯ ಪರ ಸರ್ಕಾರಿ ಅಭಿಯೋಜಕರಾದ ಚನ್ನಪ್ಪ ಜಿ. ಹರಸೂರ ಮತ್ತು ವಿಶ್ವನಾಥ್ ದೇವ್ ವಾದ ಮಂಡಿಸಿದ್ದರು.

ಇದನ್ನೂ ಓದಿ: ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ಪಡೆದು ಯುವಕನಿಂದ ವೈರಲ್​ ಬೆದರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.