ETV Bharat / state

ಲಂಚ ಕೇಸ್​ನಲ್ಲಿ ಬೆಂಗಳೂರು ಜಲಮಂಡಳಿ ಎಂಜಿನಿಯರ್‌ಗೆ 5 ವರ್ಷ ಜೈಲು ಶಿಕ್ಷೆ.. ಭ್ರಷ್ಟರಿಗೆ ಎಚ್ಚರಿಕೆ ಗಂಟೆ - ಲಂಚ ಪಡೆದಿದ್ದ ಅಧಿಕಾರಿಗೆ ಶಿಕ್ಷೆ ಪ್ರಕಟ

ಬೆಂಗಳೂರು ಜಲಮಂಡಳಿಯ ಕಿರಿಯ ಎಂಜಿನಿಯರ್‌ಗೆ ನಗರದ 23ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ಜಲಮಂಡಳಿ ಎಂಜಿನಿಯರ್‌ಗೆ 5 ವರ್ಷ ಜೈಲು ಶಿಕ್ಷೆ

author img

By

Published : Mar 30, 2022, 8:51 PM IST

ಬೆಂಗಳೂರು: ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಇಂಜಿನಿಯರ್​ಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಇದು ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ವಾಣಿಜ್ಯ ಕಟ್ಟಡಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಸಂಬಂಧ 10 ಸಾವಿರ ರೂಪಾಯಿ ಲಂಚ ಪಡೆದ ಬೆಂಗಳೂರು ಜಲಮಂಡಳಿಯ ಕಿರಿಯ ಎಂಜಿನಿಯರ್‌ಗೆ ನಗರದ 23ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಎಚ್.ಬಿ ಚನ್ನೇಶಪ್ಪ ಶಿಕ್ಷೆಗೆ ಗುರಿಯಾದ ಕಿರಿಯ ಎಂಜಿನಿಯರ್.

ಬೆಂಗಳೂರು ನಗರದ ಟಿ.ದಾಸರಹಳ್ಳಿ ನಿವಾಸಿಯೊಬ್ಬರು ತಮ್ಮ ಸ್ನೇಹಿತನ ವಾಣಿಜ್ಯ ಕಟ್ಟಡಕ್ಕೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಸಂಬಂಧ 2017ನೇ ಸಾಲಿನ ಜನವರಿಯಲ್ಲಿ ಬೆಂಗಳೂರು ಜಲಮಂಡಳಿಯ ನಾಗರಬಾವಿ ಉಪ ವಿಭಾಗದ ಕಿರಿಯ ಎಂಜಿನಿಯರ್‌ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿರಿಯ ಎಂಜಿನಿಯರ್‌ ಹೆಚ್ ಬಿ ಚನ್ನೇಶಪ್ಪ 30 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಎಸಿಬಿ ಪೊಲೀಸರು, ಚನ್ನೇಶಪ್ಪ ಅವರು ದೂರುದಾರನಿಂದ 10 ಸಾವಿರ ರೂ. ಲಂಚ ಪಡೆಯುವಾಗ ಬಂಧಿಸಿದ್ದರು.

ಇದನ್ನೂ ಓದಿ: ಮೈಸೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು: ನೊಂದ ತಾಯಿಯ ಆಕ್ರಂದನ

ಬಳಿಕ, ತನಿಖೆ ಪೂರ್ಣಗೊಳಿಸಿ 23ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಕಿರಿಯ ಎಂಜಿನಿಯರ್ ಚನ್ನೇಶಪ್ಪ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.