ETV Bharat / state

ಕರ್ನಾಟಕ ಮರುನಾಮಕರಣಕ್ಕೆ 50 ವರ್ಷ, ವರ್ಷವಿಡೀ ಸಂಭ್ರಮ: ಸಿಎಂ ಸಿದ್ದರಾಮಯ್ಯ - ಸಿಎಂ ಸಿದ್ದರಾಮಯ್ಯ

ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 1, 2023 ರಿಂದ 2024 ನವೆಂಬರ್‌ 1ರವರೆಗೆ 'ಕರ್ನಾಟಕ ಸಂಭ್ರಮ' ಆಚರಿಸುವ ಕುರಿತ ಪೂರ್ವಭಾವಿ ಸಭೆ ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

meeting was chaired by CM Siddaramaiah.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
author img

By ETV Bharat Karnataka Team

Published : Oct 4, 2023, 9:40 PM IST

ಬೆಂಗಳೂರು : "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಎಂಬ ಹೆಸರಿನಲ್ಲಿ 1 ನವೆಂಬರ್ 2023 ರಿಂದ 01 ನವೆಂಬರ್ 2024ರ ವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಕರ್ನಾಟಕ ಸಂಭ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ದೇಶಿ ಕ್ರೀಡೆ ಹಮ್ಮಿಕೊಳ್ಳುವುದು, ರಾಜ್ಯದ ದೇಶಿ ಸಂಸ್ಕೃತಿಯನ್ನು ಹೆಚ್ವು ಬಿಂಬಿಸುವುದು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೆ ಮುಟ್ಟಿಸುವ ಕೆಲಸ ಆಗಬೇಕು. ಈ ಸಂದರ್ಭದಲ್ಲಿ ಅರ್ಥಪೂರ್ಣ, ಸಂಭ್ರಮದ ಕಾರ್ಯಕ್ರಮ ಆಯೋಜಿಸಿ ಎಂದು ಸಿಎಂ ಸೂಚಿಸಿದರು. ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ: ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ದಿ.ಅದರಗುಂಚಿ ಶಂಕರಗೌಡ , ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ.ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ: ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡುವುದು ಹಾಗೂ ನವೆಂಬರ್ 2024ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಲಾಂಛನ: ಕರ್ನಾಟಕ ಸಂಭ್ರಮ-50 ಕಾರ್ಯಕ್ರಮದ ಲಾಂಛನವನ್ನು ಅಕ್ಟೋಬರ್ 17 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಗುತ್ತದೆ.

ಕರ್ನಾಟಕ ಎಂದು ನಾಮಕರಣಗೊಂಡು 50ನೇ ವರ್ಷವನ್ನು ಹಿಂದಿನ ಸರ್ಕಾರ ವೈಭವದಿಂದ ಆಚರಿಸಬೇಕಿತ್ತು. ಅಂದರೆ 1-11-2022 ರಿಂದ 1-11-2023ರ ವರೆಗೆ ಆಚರಿಸಬೇಕಿತ್ತು. ಹಿಂದಿನ ಸರ್ಕಾರ ಏಕೆ ಆಚರಿಸಲಿಲ್ಲ? ಈ ನಿರ್ಲಕ್ಷ್ಯ ಸರೀನಾ ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು.

ಇದನ್ನೂಓದಿ: ಮೈಸೂರು ದಸರಾ : ಅಕ್ಟೋಬರ್​ 6 ರಿಂದ 13ರ ವರೆಗೆ ಯುವ ಸಂಭ್ರಮ.. ಎಸ್​ಪಿ ಸೀಮಾ ಲಾಟ್ಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.