ಬೆಂಗಳೂರು : ಹಿರೇಕರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಘೋಷಿಸಿದ್ದಾರೆ.
ಹಿರೇಕೆರೂರು ಮತಕ್ಷೇತ್ರದಲ್ಲಿ ಈಯವರೆಗೆ ಸುಮಾರು 18 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ. ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.
ಇದನ್ನೂ ಓದಿ: ಸೋಂಕಿನಿಂದ ಮೃತಪಟ್ಟವರ ಬೇಕಾಬಿಟ್ಟಿ ಅಂತ್ಯಸಂಸ್ಕಾರ: ಗ್ರಾಮೀಣ ಭಾಗದಲ್ಲಿ ಹೆಚ್ಚಿದ ಆತಂಕ
ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಬಿಸಿ ಪಾಟೀಲ್ ಘೋಷಿಸಿದ್ದರು.