ETV Bharat / state

ನಾಡಪ್ರಭು ಆಶಯದಂತೆ ಬೆಂಗಳೂರು ಅಭಿವೃದ್ಧಿ : ಡಿಸಿಎಂ ಅಶ್ವತ್ಥ್ ನಾರಾಯಣ

author img

By

Published : Jun 27, 2021, 3:32 PM IST

Updated : Jun 27, 2021, 3:51 PM IST

ಈಗಾಗಲೇ ಕೆಂಪೇಗೌಡರ ವೀರ ಸಮಾಧಿಯುಳ್ಳ ಮಾಗಡಿ ತಾಲೂಕಿನ ಕೆಂಪಾಪುರವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಹಾಗೆಯೇ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಆಗುತ್ತಿರುವ ಸೆಂಟ್ರಲ್‌ ಪಾರ್ಕ್‌ನಲ್ಲಿ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆ ಮಾಡುವ ಕಾರ್ಯ ಮುಂದಿನ ವರ್ಷಕ್ಕೆ ಮುಗಿದು ಲೋಕಾರ್ಪಣೆಯಾಗಲಿದೆ..

512th-jayanti-celebration-of-nadaprabhu-kempegowda
ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ

ಬೆಂಗಳೂರು : 500 ವರ್ಷಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಅತ್ಯಂತ ವೈಜ್ಞಾನಿಕವಾಗಿ ಬೆಂಗಳೂರು ಮಹಾನಗರವನ್ನು ನಿರ್ಮಾಣ ಮಾಡಿದ್ದರು. ಮುಂದಿನ ದಿನಗಳಲ್ಲಿ ಅವರ ಆಶಯದಂತೆ ನಗರವನ್ನು ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಮುಂದಕ್ಕೆ ಕೊಂಡೊಯ್ಯಲು ಸರ್ಕಾರವು ಎಲ್ಲ ಕ್ರಮಕೈಗೊಳ್ಳುತ್ತಿದೆ ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ- ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ್ ನಾರಾಯಣ ಹೇಳಿದರು.

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ನಗರ ಮೇಕ್ರಿ ವೃತ್ತದ ಬಳಿಕ ಸ್ವತಃ ಕೆಂಪೇಗೌಡರೇ ನಿರ್ಮಿಸಿದ್ದ ದಕ್ಷಿಣದ ಗಡಿ ಗೋಪುರದ ಬಳಿ ಪ್ರಭುಗಳ ಪ್ರತಿಮೆಗೆ ನಮನ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಡೀ ದೇಶದಲ್ಲೇ ಅತ್ಯುತ್ತಮ ನಗರವನ್ನ ಕಟ್ಟಿ ನಮಗಾಗಿ ಬಿಟ್ಟು ಹೋಗಿದ್ದಾರೆ. ಅದರ ಆಸ್ಮಿತೆಗೆ ಧಕ್ಕೆ ಆಗದಂತೆ ನಗರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಕೆಂಪೇಗೌಡರ ವೀರ ಸಮಾಧಿಯುಳ್ಳ ಮಾಗಡಿ ತಾಲೂಕಿನ ಕೆಂಪಾಪುರವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಹಾಗೆಯೇ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಆಗುತ್ತಿರುವ ಸೆಂಟ್ರಲ್‌ ಪಾರ್ಕ್‌ನಲ್ಲಿ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆ ಮಾಡುವ ಕಾರ್ಯ ಮುಂದಿನ ವರ್ಷಕ್ಕೆ ಮುಗಿದು ಲೋಕಾರ್ಪಣೆಯಾಗಲಿದೆ. ಕೆಂಪೇಗೌಡರು ಚಿರಸ್ಥಾಯಿಯಾಗಿ ಉಳಿದುಕೊಳ್ಳಲು, ಮುಂದಿನ ತಲೆಮಾರಿಗೂ ಅವರ ಬಗ್ಗೆ ತಿಳಿಸಲು ಸರ್ಕಾರ ಎಲ್ಲ ಕ್ರಮಗಳನ್ನೂ ಕೈಗೊಂಡಿದೆ ಎಂದು ಹೇಳಿದರು.

ಮಾಗಡಿ ಶಾಸಕ ಮಂಜುನಾಥ್‌, ಬೆಂಗಳೂರು ಉತ್ತರ ಬಿಜೆಪಿ ವಿಭಾಗದ ಅಧ್ಯಕ್ಷ ನಾರಾಯಣ ಗೌಡ, ಬಿಬಿಎಂಪಿ ನಿಕಟಪೂರ್ವ ಸದಸ್ಯೆ ಸುಮಂಗಲಾ ಕೇಶವ್‌, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಹುಲವಾಡಿ ದೇವರಾಜ್‌ ಮುಂತಾದವರು ಉಪಸ್ಥಿತರಿದ್ದರು.

Last Updated : Jun 27, 2021, 3:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.