ಬೆಂಗಳೂರು: ನಗರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಜೊತೆಗೆ ಸಾವಿನ ಪ್ರಕರಣಗಳಲ್ಲೂ ಏರಿಕೆಯಾಗುತ್ತಿದೆ. ಇಂದು 5,500 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಮೊದಲ ಬಾರಿಗೆ ಸಾವಿನ ಪ್ರಕರಣಗಳ ಸಂಖ್ಯೆ 50ರ ಗಡಿ ದಾಟಿದೆ.
ಇಂದು 55 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಸೋಮವಾರ 6,387 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಮೃತಪಟ್ಟಿದ್ದರು. ಭಾನುವಾರ 7,584 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 27 ಮಂದಿ ಮೃತಪಟ್ಟಿದ್ದರು.
ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 4910ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 57,575ಕ್ಕೆ ಏರಿಕೆಯಾಗಿದೆ.
ಓದಿ: ಆಮ್ಲಜನಕದ ಕೊರತೆ: ಮಹಾರಾಷ್ಟ್ರದಲ್ಲಿ 10 ಮಂದಿ ಕೋವಿಡ್ ರೋಗಿಗಳು ಸಾವು