ಬೆಂಗಳೂರು: ನೆರೆಹಾನಿ ಪರಿಹಾರಕ್ಕಾಗಿ 577.84 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ಅಶೋಕ್ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾನಿಗೆ ಪ್ರತಿಯಾಗಿ ಕೇಂದ್ರವು ರಾಜ್ಯಕ್ಕೆ 577.84 ಕೋಟಿ ರೂ. ಬಿಡುಗಡೆ ಮಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದೆ. ಈ ಮೊತ್ತ ಬಿಡುಗಡೆಗೆ ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ರಾಜ್ಯದ ಜನತೆ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ.
ನೆರೆಹಾನಿಯಿಂದ 8000 ಕೋಟಿಗೂ ಅಧಿಕ ನಷ್ಟ ಸಂಭವಿಸಿದ್ದು, ಪರಿಹಾರ ನೀಡಿ ನೆರವಾಗುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ವರದಿ ಪಡೆದಿದ್ದ ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ 600 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಹಣ ಬಿಡುಗಡೆ ಮಾಡಿದೆ.