ETV Bharat / state

ಕೇಂದ್ರದಿಂದ ಪ.ಜಾತಿ ವಿದ್ಯಾರ್ಥಿಗಳಿಗೆ 59,048 ಕೋಟಿ ರೂ. ಸ್ಕಾಲರ್‌ಶಿಪ್.. ಛಲವಾದಿ ನಾರಾಯಣಸ್ವಾಮಿ - ಸ್ಕಾಲರ್‌ಶಿಪ್

ರಾಜ್ಯ ಸರ್ಕಾರವನ್ನು ವಿಸರ್ಜಿಸಬೇಕು ಎಂಬ ಬೇಡಿಕೆ ಮುಂದಿಡುವ ಸಿದ್ದರಾಮಯ್ಯ ಅವರು ಸ್ವತಃ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಅಲ್ಲದೇ, ಕೆ ಹೆಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಮಹಾದೇವಪ್ಪ ಅವರ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ..

59,048 crore rupees Scholarship for sc students from central government
'ಕೇಂದ್ರದಿಂದ ಪ.ಜಾತಿ ವಿದ್ಯಾರ್ಥಿಗಳಿಗೆ 59,048 ಕೋಟಿ ರೂ. ಸ್ಕಾಲರ್‌ಶಿಪ್ ಒಂದು ವರದಾನ'
author img

By

Published : Jan 3, 2021, 6:54 AM IST

ಬೆಂಗಳೂರು : ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ಬಡ ವಿದ್ಯಾರ್ಥಿಗಳಿಗೆ ವರದಾನದಂತೆ ಕಾರ್ಯ ನಿರ್ವಹಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ನಗರದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಕ್ರಮವು ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದರು. ಅನುದಾನವು ಪ್ರತಿ ವರ್ಷ ಶೇ.5ರಷ್ಟು ಹೆಚ್ಚಳವಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಸಾಮಾಜಿಕ ಸಮಾನತೆಯ ಕನಸು ನನಸಾಗಲು ಮಹೋನ್ನತ ಕೊಡುಗೆ ನೀಡಲಿದೆ. 2020-21ರಲ್ಲಿ ಕರ್ನಾಟಕಕ್ಕೆ 179.3 ಕೋಟಿ ರೂ., ಬಳಿಕ ಪ್ರತಿವರ್ಷ ಶೇ.5ರಷ್ಟು ಹೆಚ್ಚುತ್ತಾ ಹೋಗಿ 2025-26ರಲ್ಲಿ 314.79 ಕೋಟಿ ರೂ. ರಾಜ್ಯಕ್ಕೆ ಸಿಗಲಿದೆ. ಒಟ್ಟು 1,578 ಕೋಟಿ ರೂಪಾಯಿ ರಾಜ್ಯಕ್ಕೆ ಹರಿದು ಬರಲಿದೆ. ರಾಜ್ಯ ಸರ್ಕಾರವು ಇದಕ್ಕೆ ಪೂರಕವಾಗಿ ಶೇ. 40ರಷ್ಟು ಅನುದಾನ ಕೊಡಲಿದೆ ಎಂದರು.

ಹಿಂದೆ ದಲಿತರು ಬಿಜೆಪಿಯಿಂದ ದೂರ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದರು. ಈಗ ದಲಿತರು ಸಂಪೂರ್ಣವಾಗಿ ಬಿಜೆಪಿ ಕಡೆ ಬಂದಿದ್ದಾರೆ. ಇದನ್ನು ಮಾನ್ಯ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ದಲಿತರು ದೂರ ಹೋದುದೇ ನನ್ನ ಸೋಲಿಗೆ ಮತ್ತು ಅಧಿಕಾರ ಕಳೆದುಕೊಳ್ಳಲು ಕಾರಣ ಎಂದು ಅವರು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು. ಪ್ರತಿ ಹಳ್ಳಿಹಳ್ಳಿಗಳಲ್ಲೂ ಈಗ ಕಮಲ ಅರಳಿದೆ. ನಮ್ಮ ಬೆಂಬಲಿತ ಅಭ್ಯರ್ಥಿಗಳು ಹಾಗೂ ಪಕ್ಷ ಗೆದ್ದಿದ್ದು, ಕಾಂಗ್ರೆಸ್ ಬಿದ್ದಿದೆ ಎಂದರು.

ಈ ಸುದ್ದಿಯನ್ನೂ ಓದಿ: ಪಾಕ್ ಪರ ಘೋಷಣೆ ಪ್ರಕರಣ: ಪೊಲೀಸರ ಕ್ರಮ ಖಂಡನೀಯ ಎಂದ ಮಾಜಿ ಮೇಯರ್​​

ದಾವಣಗೆರೆಯಲ್ಲಿ ಇದೇ ತಿಂಗಳ 6ರಂದು ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಇದರಲ್ಲಿ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ಭಾಗವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಸಿದ್ದರಾಜು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಅರುಣ್‌ಕುಮಾರ್, ಸಂಸದರಾದ ಸಿದ್ದೇಶ್ವರ್, ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಇನ್ನು, ರಾಜ್ಯ ಸರ್ಕಾರವನ್ನು ವಿಸರ್ಜಿಸಬೇಕು ಎಂಬ ಬೇಡಿಕೆ ಮುಂದಿಡುವ ಸಿದ್ದರಾಮಯ್ಯ ಅವರು ಸ್ವತಃ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಅಲ್ಲದೇ, ಕೆ ಹೆಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಮಹಾದೇವಪ್ಪ ಅವರ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.