ಬೆಂಗಳೂರು: ನಗರದಲ್ಲಿಂದು ಅತ್ಯಂತ ಕಡಿಮೆ ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 597 ಜನರಲ್ಲಿ ಪಾಸಿಟಿವ್ ಬಂದಿದೆ. 6 ಮಂದಿ ಮೃತಪಟ್ಟಿದ್ದಾರೆ.
ದೀಪಾವಳಿ ಹಬ್ಬದ ಹಿನ್ನೆಲೆ ಕಡಿಮೆ ಜನರು ಸೋಂಕು ಪರೀಕ್ಷೆ ಮಾಡಿಸಿರುವ ಸಾಧ್ಯತೆ ಇರುವುದರಿಂದ ಕಡಿಮೆ ಜನರ ರಿಸಲ್ಟ್ ಬಂದಿದೆ. ಅಲ್ಲದೆ ಸದ್ಯ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಮುಖವಾಗಿದ್ದು, ಹಬ್ಬ ಮುಗಿದ ಬಳಿಕ ಹೆಚ್ಚಾಗುವ ಸಾಧ್ಯತೆಯೂ ಇದೆ.
ಇಂದು 833 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,57,877ಕ್ಕೆ ಏರಿಕೆಯಾಗಿದ್ದು, ಈವರೆಗೆ 3,35,938 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 17,929 ಸಕ್ರಿಯ ಕೋವಿಡ್ ಪಾಸಿಟಿವ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 4,009ಕ್ಕೆ ಏರಿಕೆಯಾಗಿದೆ. 368 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.