ETV Bharat / state

ರಾಜ್ಯದಲ್ಲಿ 6,7,8ನೇ ತರಗತಿ ಪುನಾರಂಭಕ್ಕೆ ಸರ್ಕಾರದಿಂದ ಗ್ರೀನ್​ ಸಿಗ್ನಲ್​ - ರಾಜ್ಯದಲ್ಲಿ ಶಾಲೆ ಆರಂಭ

ರಾಜ್ಯದಲ್ಲಿ ಕೋವಿಡ್​ ಪಾಸಿಟಿವಿಟಿ ದರವು ಶೇ. 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲು ನಿರ್ಧರಿಸಲಾಗಿದೆ.

67-8th-class-to-start-from-september-6th
ರಾಜ್ಯದಲ್ಲಿ ಪಾಸಿಟಿವಿಟಿ ದರವು ಶೇ. 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8ನೇ ತರಗತಿ ಆರಂಭಕ್ಕೆ ನಿರ್ಧಾರ
author img

By

Published : Aug 30, 2021, 6:29 PM IST

Updated : Aug 30, 2021, 7:34 PM IST

ಬೆಂಗಳೂರು: ಪ್ರಾಥಮಿಕ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸೆ.6ರಿಂದ ಅನ್ವಯವಾಗುವಂತೆ 6ರಿಂದ 8ನೇ ತರಗತಿವರೆಗಿನ ಶಾಲೆಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ಗಣೇಶ ಚತುರ್ಥಿ ಆಚರಣೆಗೂ ಷರತ್ತುಬದ್ಧ ಅನುಮತಿ ನೀಡುವ ಚಿಂತನೆ ನಡೆಸಿದ್ದು, ಸೆ. 5ರಂದು ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಕುರಿತು ಇಂದಿನ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ಸಭೆ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸಚಿವ ಆರ್.ಅಶೋಕ್, ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ 6ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಸೆ. 6ರಿಂದ ತೆರೆಯಲು ಅನುಮತಿ ನೀಡಲಾಗಿದೆ. ಕೊರೊನಾ ಮಾರ್ಗಸೂಚಿ ಅನುಸರಿಸಿ ದಿನ ಬಿಟ್ಟು ದಿನ ಶೇ. 50ರ ಹಾಜರಾತಿಯಂತೆ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ವಾರದಲ್ಲಿ ಐದು ದಿನ ಮಾತ್ರ ಶಾಲೆ ನಡೆಯಲಿದ್ದು, ವಾರಾಂತ್ಯದಲ್ಲಿ ಎರಡು ದಿನ ಶಾಲೆಗಳು ಇರುವುದಿಲ್ಲ. ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳು ನಡೆಯಲಿವೆ. ಇನ್ನುಳಿದ ಎರಡು ದಿನ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸಿಂಗ್​​ಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

14 ಮಕ್ಕಳಿಗೆ ಮಾತ್ರ ಪಾಸಿಟಿವ್:

ಕಳೆದ ವಾರ 9ರಿಂದ 12ನೇ ತರಗತಿವರೆಗೆ ಶಾಲೆಗಳ ತೆರೆಯಲು ಅವಕಾಶ ಮಾಡಿಕೊಡಲಾಗಿತ್ತು. ಸರ್ಕಾರಿ ಶಾಲೆಗಳಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಶಾಲೆಗಳಲ್ಲಿ ಇನ್ನೂ ಸ್ವಲ್ಪ ಹಾಜರಾತಿ ಕಡಿಮೆಯಿದ್ದು, ಅದು ಉತ್ತಮಗೊಳ್ಳುವ ನಿರೀಕ್ಷೆಯಿದೆ. ರಾಜ್ಯದ 2,912 ಪಂಚಾಯತಿಗಳಲ್ಲಿ ಜೀರೋ ಪಾಸಿಟಿವಿಟಿ ದರ ಇದೆ. 9ರಿಂದ 12ನೇ ತರಗತಿವರೆಗಿನ 6,472 ಮಕ್ಕಳ ಕೊರೊನಾ ಪರೀಕ್ಷಾ ಮಾದರಿ ಸಂಗ್ರಹ ಮಾಡಲಾಗಿದೆ. ಅದರಲ್ಲಿ ಕೇವಲ 14 ಮಕ್ಕಳಿಗೆ ಮಾತ್ರ ಪಾಸಿಟಿವ್ ಬಂದಿದೆ. ಹಾಗಾಗಿ ಸರ್ಕಾರ 6ನೇ ತರಗತಿಯಿಂದ ಶಾಲೆಗಳ ಆರಂಭಕ್ಕೆ ತೀರ್ಮಾನ ಮಾಡಿದೆ ಎಂದು ಮಾಹಿತಿ ನೀಡಿದರು.

ಮಾಧ್ಯಮದವರಿಗೆ ಸಚಿವ ಆರ್.ಅಶೋಕ್ ಮಾಹಿತಿ

ಗಣೇಶ ಹಬ್ಬದ ಸಾರ್ವಜನಿಕ ಆಚರಣೆ ಬಗ್ಗೆ ಸಭೆ:

ರಾಜ್ಯದಲ್ಲಿ ಗಣೇಶ ಹಬ್ಬದ ಸಾರ್ವಜನಿಕ ಆಚರಣೆಗೆ ಅವಕಾಶ ನೀಡುವ ಚಿಂತನೆ ಸರ್ಕಾರಕ್ಕೆ ಇದೆ. ದೊಡ್ಡ ದೊಡ್ಡ ಗಣೇಶ ವಿಗ್ರಹ ಕೂರಿಸಿ ಆಚರಿಸುವವರ ಜೊತೆ ಸಭೆ ನಡೆಸಿದಂತೆ ಸೆ. 5ರಂದು ಮತ್ತೊಮ್ಮೆ ಸಭೆ ಸೇರಿ ಗಣೇಶ ಉತ್ಸವಕ್ಕೆ ಅವಕಾಶ ಕಲ್ಪಿಸುವ ಕುರಿತು ನಿರ್ಧಾರ ಪ್ರಕಟಿಸಲಾಗುತ್ತದೆ. ಕಳೆದ ಬಾರಿಯ ಆಚರಣೆಗಿಂತ ಸ್ವಲ್ಪ ಹೆಚ್ಚಿನ ರಿಯಾಯಿತಿ ನೀಡಿ ಅವಕಾಶ ಕಲ್ಪಿಸಬೇಕು ಎನ್ನುವ ಬೇಡಿಕೆ ಬಂದಿದೆ. ಆದರೆ ನಾವು ಮೂರನೇ ಅಲೆಯ ಭೀತಿಯಲ್ಲಿದ್ದೇವೆ. ಕೇರಳದಲ್ಲಿ ಓಣಂ ಆಚರಣೆ ನಂತರ ಕೋವಿಡ್ ಹೆಚ್ಚಾದ ನಿದರ್ಶನ ಕಣ್ಮುಂದೆ ಇದೆ. ಹಾಗಾಗಿ ಎಲ್ಲವನ್ನೂ ಗಮನದಲ್ಲಿರಿಸಿಕೊಂಡು ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Mysuru Gangrape Case : ಆರೋಪಿಗಳನ್ನ ಕರೆತಂದು ಪೊಲೀಸರಿಂದ ಸ್ಥಳ ಮಹಜರು

Last Updated : Aug 30, 2021, 7:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.