ಬೆಂಗಳೂರು: ರಾಜ್ಯದಲ್ಲಿ ಇವತ್ತೂ ಕೂಡ ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದು, ಇದರ ಮಧ್ಯೆಯೂ ಕೂಡ ಅತಿ ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿದ್ದು, 110 ಜನರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಯಲ್ಲಿ 6,259 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಡಿಸ್ಚಾರ್ಜ್ ಹೊಂದಿದವರ ಸಂಖ್ಯೆ ಕೂಡ 6,777 ಆಗಿದೆ. ಈ ಮೂಲಕ ರಾಜ್ಯದಲ್ಲಿ 69,272 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 1,45,830 ಖಚಿತ ಪ್ರಕರಣಗಳಿದ್ದು, ಇದರಲ್ಲಿ 73,846 ಸಕ್ರಿಯ ಕೇಸ್ಗಳಿವೆ. ಇಂದು ಕೂಡ 110 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ಇದೀಗ 2,704 ಆಗಿದೆ. ಇತ್ತ 634 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ, ಸೋಂಕಿತರ ಸಂಪರ್ಕದಲ್ಲಿರುವ ಲಕ್ಷಾಂತರ ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಬರೋಬ್ಬರಿ 2,78,379 ಮಂದಿ ನಿಗಾವಣೆಯಲ್ಲಿದ್ದಾರೆ.
ರಾಜ್ಯದಲ್ಲಿ ಮರಣ ದರ ಕಡಿಮೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ ದರ ಕಡಿಮೆಯಾಗಿದೆ. ಇದು ಸಮಾಧಾನಕರ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
-
ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತೀ ದಶಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ. @CMofKarnataka pic.twitter.com/lJg5PUTE2K
— Dr Sudhakar K (@mla_sudhakar) August 4, 2020 " class="align-text-top noRightClick twitterSection" data="
">ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತೀ ದಶಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ. @CMofKarnataka pic.twitter.com/lJg5PUTE2K
— Dr Sudhakar K (@mla_sudhakar) August 4, 2020ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತೀ ದಶಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ. @CMofKarnataka pic.twitter.com/lJg5PUTE2K
— Dr Sudhakar K (@mla_sudhakar) August 4, 2020
ಪ್ರತಿ 10 ಲಕ್ಷ ಜನಸಂಖ್ಯೆಗೆ ಕೋವಿಡ್ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ ಎಂದು ಟ್ಟೀಟ್ ಮಾಡಿದ್ದಾರೆ. 10 ಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 39 ಮತ್ತು ಬೆಂಗಳೂರಿನಲ್ಲಿ 115 ಕೋವಿಡ್ ಮರಣ ದರವಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಗಳಿಗೆ ಎಚ್ಚರಿಕೆ:
ಆಸ್ಪತ್ರೆಗಳಲ್ಲಿ ರೋಗಿಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲು ವಿಳಂಬ ಮಾಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
-
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಕ್ಜನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿವುದು.
— Dr Sudhakar K (@mla_sudhakar) August 4, 2020 " class="align-text-top noRightClick twitterSection" data="
">ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಕ್ಜನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿವುದು.
— Dr Sudhakar K (@mla_sudhakar) August 4, 2020ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಕ್ಜನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿವುದು.
— Dr Sudhakar K (@mla_sudhakar) August 4, 2020
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹ ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.