ಬೆಂಗಳೂರು: ರಾಜ್ಯದಲ್ಲಿಂದು 6,570 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 10,40,130ಕ್ಕೆ ಏರಿಕೆ ಆಗಿದೆ.
ಇಂದು 36 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,767ಕ್ಕೆ ಏರಿದೆ. 2,393 ಮಂದಿ ಚೇತರಿಸಿಕೊಂಡಿದ್ದು, ಇಲ್ಲಿಯವರೆಗೆ 9,73,949 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ಏರಿಕೆಯಾಗಿದೆ.
357 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಶೇಕಡಾವಾರು 6.04ರಷ್ಟು ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 0.54ರಷ್ಟಿದೆ.
ಇದನ್ನೂ ಓದಿ: ಶಾಪಿಂಗ್ ಮಾಡಲು ಸೂಪರ್ ಮಾರ್ಕೆಟ್ಗೆ ಲಗ್ಗೆ ಹಾಕಿದ ಉಡ.. ದೈತ್ಯ ಪ್ರಾಣಿ ನೋಡಿ ಬೆಚ್ಚಿಬಿದ್ದ ಗ್ರಾಹಕರು!