ಬೆಂಗಳೂರು: ನಗರದಲ್ಲಿ ಕೊರೊನಾ ರೋಗಿಗಳು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು 665 ಆಂಬುಲೆನ್ಸ್ಗಳನ್ನು ನಿಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, ನಗರದಲ್ಲಿ 665 ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕರೆದೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬಿಬಿಎಂಪಿಯ ಪೂರ್ವ ವಲಯದಲ್ಲಿ 127, ಪಶ್ಚಿಮ ವಲಯದಲ್ಲಿ 141, ದಕ್ಷಿಣದಲ್ಲಿ 110, ರಾಜರಾಜೇಶ್ವರಿ ನಗರದಲ್ಲಿ 40, ಬೊಮ್ಮನಹಳ್ಳಿಯಲ್ಲಿ 43, ಮಹದೇವಪುರದಲ್ಲಿ 52, ದಾಸರಹಳ್ಳಿಯಲ್ಲಿ 24, ಯಲಹಂಕದಲ್ಲಿ 33 ಆಂಬ್ಯುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಪೊಲೀಸ್ ಇಲಾಖೆಯಿಂದ 11 ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 84 ಆಂಬ್ಯುಲೆನ್ಸ್ಗಳನ್ನು ನಿಯೋಜನೆ ಮಾಡಲಾಗಿದೆ.