ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕಿತರ ಹಾಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಇಳಿಕೆಯಾಗುತ್ತಿದೆ. ನಿತ್ಯ 10 ಸಾವಿರ ಗಡಿ ದಾಟುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ ಕಂಡಿದೆ.
ರಾಜ್ಯದಲ್ಲಿಂದು 7,012 ಜನರಿಗೆ ಸೋಂಕು ದೃಢವಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 7,65,586 ಕ್ಕೆ ಏರಿಕೆ ಆಗಿದೆ. 51 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 10,478ಕ್ಕೆ ಏರಿಕೆ ಆಗಿದ್ದು,19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ.
ಇಂದು 8,344 ಜನರು ಡಿಸ್ಚಾರ್ಜ್ ಆಗಿದ್ದು, 6,45,825 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 1,09,254 ಸಕ್ರಿಯ ಪ್ರಕರಣಗಳಿದ್ದು, 945 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 7 ದಿನಗಳಲ್ಲಿ 1,06,235 ಜನರು ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ. ಈವರೆಗೆ ರಾಜ್ಯದಲ್ಲಿ 66,67,777 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಕೋವಿಡ್:
ಬೆಂಗಳೂರು ನಗರದಲ್ಲಿ 3,535 ಜನರಿಗೆ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 3,07,540ಕ್ಕೆ ಏರಿಕೆ ಆಗಿದೆ. ಇಂದು 3,845 ಜನರು ಡಿಸ್ಚಾರ್ಜ್ ಆಗಿದ್ದು, ಒಟ್ಟು 2,39,579 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಇಂದು 25 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 3,525 ಕ್ಕೆ ಏರಿಕೆ ಆಗಿದೆ. ಇನ್ನು 64,435 ಸಕ್ರಿಯ ಪ್ರಕರಣಗಳಿವೆ.