ಬೆಂಗಳೂರು: ಟಿಪ್ಪು ನಗರದಲ್ಲಿ 77 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರೆಲ್ಲರಿಗೂ ಕೋವಿಡ್ -19 ಪರೀಕ್ಷೆ ಮಾಡಿದ್ದು, ವರದಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಆ ಭಾಗದಲ್ಲಿ ಆರು ಜನಕ್ಕೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ತಬ್ಲಿಘಿಗೆ ಹೋಗಿದ್ದರೋ ಇಲ್ಲವೋ ಎಂಬ ಮಾಹಿತಿ ಇಲ್ಲ. ಆದರೆ, ದೆಹಲಿಯಿಂದ ವಾಪಸ್ ಬಂದಿದ್ದು ಎನ್ನುವ ಬಗ್ಗೆ ಮಾಹಿತಿ ಇದೆ ಎಂದರು.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು ಇರುವ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಗುರುತಿಸಿದ್ದೇವೆ. ಪ್ರತಿ ಝೋನ್ಗೂ ಒಬ್ಬ ಕಾಂಟೋನ್ಮೆಂಟ್ ಆಫೀಸರ್ ನೇಮಕ ಮಾಡಿದ್ದೇವೆ. ಅವರ ಕೆಳಗೆ ಆರೋಗ್ಯ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಬರ್ತಾರೆ, ಕ್ವಾಂರಟೈನ್ ಮಾಡುವುದು, ನಿತ್ಯ ಸ್ಪ್ರೇ ಮಾಡುವುದು, ಕಠಿಣ ಕ್ರಮ ಕೈಗೊಳ್ಳುವ ಕೆಲಸವನ್ನು ಅವರು ನಿರ್ವಹಣೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.