ETV Bharat / state

ಸರ್ಕಾರಿ ನೌಕರರು, ಸಾರ್ವಜನಿಕರಿಂದ ಸಲಹೆ ಕೋರಿದ 7ನೇ ವೇತನ ಆಯೋಗ - 5 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ

7ನೇ ವೇತನ ಆಯೋಗದ ಜಾರಿಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಫೆಬ್ರವರಿ 10ರೊಳಗೆ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡುವಂತೆ ಆಯೋಗ ಕೋರಿದೆ.

vidhana soudha
ವಿಧಾನಸೌಧ
author img

By

Published : Jan 18, 2023, 6:52 AM IST

ಬೆಂಗಳೂರು: ಏಳನೇ ವೇತನ ಆಯೋಗದ ಜಾರಿ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಆಯೋಗವು ಸರ್ಕಾರಿ ನೌಕರರು ಮತ್ತು ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಕೇಳಿದೆ. ಈ ಸಂಬಂಧ ಪ್ರಶ್ನಾವಳಿಗಳನ್ನು ಸಿದ್ಧಪಡಿಸಿ ಉತ್ತರ ನೀಡುವಂತೆ ತಿಳಿಸಿದೆ. ಫೆಬ್ರವರಿ 10ರೊಳಗೆ ಅಭಿಪ್ರಾಯ ಮತ್ತು ಸಲಹೆಗಳನ್ನು ಆಯೋಗಕ್ಕೆ ನೀಡಬಹುದು.

ಸರ್ಕಾರಿ ನೌಕರರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖೆಯ ಮುಖಸ್ಥರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ವರ್ಗ, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆ ಮತ್ತು ಸಾರ್ವಜನಿಕರಿಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ನೀಡುವಂತೆ ಹೇಳಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 7,69,981 ಮಂಜೂರಾದ ಹುದ್ದೆಗಳಿದ್ದು 5,11,271 ಹುದ್ದೆಗಳು ಕಾರ್ಯನಿರ್ವಹಿಸುತ್ತಿವೆ. ಇನ್ನೂ 2,58,709 ಹುದ್ದೆಗಳು ಖಾಲಿ ಇವೆ ಎಂದು ಆಯೋಗವು ತಿಳಿಸಿದೆ.

ಅನಿಸಿಕೆ ತಿಳಿಸಲು ಫೆ.10 ಕೊನೆಯ ದಿನ: ಸಂಬಂಧಪಟ್ಟ ಪ್ರಶ್ನಾವಳಿಗಳಿಗೆ ಸರ್ಕಾರದ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು, ವಿಶ್ವವಿದ್ಯಾನಿಲಯಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ಸರ್ಕಾರಿ ನೌಕರರು, ನಿವೃತ್ತ ವೇತನದಾರರು ಹಾಗೂ ಆಸಕ್ತ ಸಾರ್ವಜನಿಕರು ಉತ್ತರಗಳನ್ನು ತಮ್ಮ ಅನಿಸಿಕೆ ಹಾಗೂ ಮುಕ್ತ ಸಲಹೆಗಳೊಂದಿಗೆ ಕಾರ್ಯದರ್ಶಿ, 7ನೇ ರಾಜ್ಯ ವೇತನ ಆಯೋಗ, 3ನೇ ಮಹಡಿ, ಔಷಧ ನಿಯಂತ್ರಣ ಇಲಾಖೆಯ ಕಟ್ಟಡ, ಅರಮನೆ ರಸ್ತೆ ಬೆಂಗಳೂರು - 560001 ಇವರಿಗೆ ಫೆ. 10 ರೊಳಗೆ ಸಲ್ಲಿಸಬಹುದು.

7ನೇ ರಾಜ್ಯ ವೇತನ ಆಯೋಗ: ಸರ್ಕಾರವು ರಾಜ್ಯ ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ಅವರಿಗೆ ಹೊಸ ವೇತನ ರಚನೆಯನ್ನು ಶಿಫಾರಸು ಮಾಡಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಸಿಬ್ಬಂದಿ ನಡುವಿನ ಹುದ್ದೆಗಳ ಸಮಾನತೆಯನ್ನು ನಿರ್ಧರಿಸುವ ಮೂಲಕ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಆಯೋಗವನ್ನು ಕೋರಲಾಗಿದೆ.

ನಿವೃತ್ತಿ ವೇತನ, ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವೈದ್ಯಕೀಯ ಸೌಲಭ್ಯ ಮತ್ತು ಇತರೆ ಸೌಲಭ್ಯಗಳಿಗೆ ಸಂಬಂಧಿಸಿದಂತೆಯೂ ಅವಶ್ಯವಿರುವ ಬದಲಾವಣೆಗಳ ಕುರಿತು ಶಿಫಾರಸು ಮಾಡುವಂತೆ ಆಯೋಗಕ್ಕೆ ಸೂಚಿಸಲಾಗಿದೆ. ವೇತನ ಆಯೋಗವು ತನ್ನ ಶಿಫಾರಸುಗಳನ್ನು ಮಾಡುವಲ್ಲಿ ರಾಜ್ಯದ ಸಂಪನ್ಮೂಲಗಳು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾದ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ನಿಯಂತ್ರಕ ಕಾರ್ಯಗಳು, ಋಣ ಸೇವಾ ನಿರ್ವಹಣೆಗಳು ಮತ್ತು ಇತರೆ ಅಭಿವೃದ್ಧಿಯೇತರ ಅಗತ್ಯಗಳನ್ನು ಮತ್ತು ರಾಜ್ಯ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯಮ 2002ರ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಬೇಕಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ 7ನೇ ವೇತನ ಆಯೋಗದ ನಿರೀಕ್ಷೆಗಳೇನು?

5 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ: ರಾಜ್ಯ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಹಾಗೂ ವಿಶ್ವವಿದ್ಯಾನಿಲಯದ ಬೋಧಕೇತರ ಸಿಬ್ಬಂದಿಯ ವೇತನ ಹಾಗೂ ಭತ್ಯೆಗಳ ಪರಿಷ್ಕರಣೆಯನ್ನು ಸಾಮಾನ್ಯವಾಗಿ 5 ವರ್ಷಗಳಿಗೊಮ್ಮೆ ವೇತನ ಆಯೋಗ ಅಥವಾ ವೇತನ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಕಳೆದ ಬಾರಿ 6ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ವೇತನ ಭತ್ಯೆಗಳನ್ನು ದಿನಾಂಕ: 01-07-2017 ರಿಂದ ಜಾರಿಗೆ ಬರುವಂತೆ ಹಾಗೂ ಆರ್ಥಿಕ ಪ್ರಯೋಜನಗಳು ದಿನಾಂಕ: 01-04-2018 ರಿಂದ ಅನ್ವಯವಾಗುವಂತೆ 2018 ರಲ್ಲಿ ಪರಿಷ್ಕರಿಸಲಾಗಿತ್ತು.

ಸರ್ಕಾರಿ ನೌಕರರ ವೇತನ ಶ್ರೇಣಿ: ಹೊಸ ವೇತನ ರಚನೆ ಮಾಡುವಾಗ ಸಾಮಾನ್ಯವಾಗಿ ಅಳವಡಿಸಿಕೊಳ್ಳುವ ಮಾನದಂಡಗಳಲ್ಲಿ ವಿವಿಧ ಹುದ್ದೆಗಳ ವಿದ್ಯಾರ್ಹತೆ ಮತ್ತು ತರಬೇತಿ, ಜವಾಬ್ದಾರಿಯ ಪ್ರಮಾಣ, ಕಾರ್ಯಕ್ಷೇತ್ರದ ವ್ಯಾಪ್ತಿ, ವೃತ್ತಿ ಸಂಬಂಧಿತ ತೊಂದರೆಗಳು, ನಿರ್ಣಯ ತೆಗೆದುಕೊಳ್ಳಲು ಅಗತ್ಯವಿರುವ ಹಂತಗಳು, ಬಡ್ತಿ ಅವಕಾಶಗಳು, ಇತರೆ ಇಲಾಖೆಗಳಲ್ಲಿರುವ ಸಮಾನ ದರ್ಜೆಯ ಹುದ್ದೆಗಳ ಸಮಾನಾಂತರ ಹಾಗೂ ನೇರ ಸಂಬಂಧದ ತುಲನಾತ್ಮಕ ಸ್ವರೂಪ ಮತ್ತು ಕಾಲ ಕಾಲಕ್ಕೆ ರಚನೆ ಆಗಿರುವ ವೇತನ ಶ್ರೇಣಿಗಳ ಕುರಿತ ಐತಿಹಾಸಿಕ ಸಂಬಂಧಗಳು ಮುಂತಾದವು ಒಳಗೊಂಡಿದೆ.

ಇದನ್ನೂ ಓದಿ: ಏಳನೇ ವೇತನ ಆಯೋಗಕ್ಕೆ 44 ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ

ಸರ್ಕಾರದ ಕಾರ್ಯಗಳ ಮೂಲ ಉದ್ದೇಶಗಳಲ್ಲಿ ಇತರೆ ಕರ್ತವ್ಯಗಳ ಜೊತೆ ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆ, ಸಾಮಾಜಿಕ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವುದು, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಅಭಿವೃದ್ಧಿ ಮತ್ತು ಸಮಾನ ಅವಕಾಶಗಳಿಗೆ ಉತ್ತೇಜನ ನೀಡುವ ಕ್ರಮವು ಒಳಗೊಂಡಿರುತ್ತದೆ. ಈ ಉದ್ದೇಶಗಳನ್ನು ಸಾಧಿಸಲು, ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ವಿವಿಧ ಹಂತಗಳಲ್ಲಿ ಸುಮಾರು 5 ಲಕ್ಷ ಉದ್ಯೋಗಿಗಳನ್ನು ನೇಮಿಸಿಕೊಂಡಿದೆ. ಈ ಉದ್ಯೋಗಿಗಳಲ್ಲಿ ಸುಮಾರು 80% ರಷ್ಟು ಸಿಬ್ಬಂದಿ ಪೊಲೀಸ್, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ಕೃಷಿ ಮತ್ತು ಸಮಾಜ ಕಲ್ಯಾಣ ಕ್ಷೇತ್ರಗಳಲ್ಲಿ ನೇಮಿಸಲಾಗಿದೆ.

ರಾಜ್ಯ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ನಿವೃತ್ತ ನೌಕರರು / ನಿವೃತ್ತ ನೌಕರರ ಕುಟುಂಬಗಳ ಸಂಖ್ಯೆ ಸುಮಾರು 5.11 ಲಕ್ಷ. 2022-23 ರಲ್ಲಿ ವೇತನ ಮತ್ತು ಪಿಂಚಣಿಗಳ ವೆಚ್ಚವನ್ನು ಕ್ರಮವಾಗಿ 41,288 ಕೋಟಿ ರೂ. ಗಳು ಮತ್ತು 24,016 ಕೋಟಿ ರೂ. ಗಳೆಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಆದಾಯದಲ್ಲಿ (ತೆರಿಗೆ + ತೆರಿಗೆಯೇತರ + ಹಂಚಿಕೆ) ವೇತನದ ಮೇಲಿನ ವೆಚ್ಚವು 21.70% ರಷ್ಟು ಮತ್ತು ಪಿಂಚಣಿ ಮೇಲಿನ ವೆಚ್ಚವು 12% ರಷ್ಟಾಗಿದೆ. ಅಲ್ಲದೇ, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಯ ವೇತನ ವೆಚ್ಚ ಮತ್ತು ಪಿಂಚಣಿ ಪಾವತಿಗಳನ್ನು ಪೂರೈಸಲು ರಾಜ್ಯ ಸರ್ಕಾರವು ಸಹಾಯಧನವನ್ನು ಒದಗಿಸುತ್ತದೆ.

ಇದನ್ನೂ ಓದಿ: 7ನೇ ವೇತನ ಆಯೋಗ ರಚನೆಗೆ ಅನುಮೋದನೆ.. ಮೂವರು ಸದಸ್ಯರ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.