ETV Bharat / state

7ನೇ ರಾಜ್ಯ ವೇತನ ಆಯೋಗದಿಂದ ಪ್ರಶ್ನಾವಳಿ ಬಿಡುಗಡೆ: ಸಲಹೆ, ಅಭಿಪ್ರಾಯ ಆಹ್ವಾನ

ರಾಜ್ಯ ವೇತನ ಆಯೋಗವು ಪ್ರಶ್ನಾವಳಿ ಬಿಡುಗಡೆ ಮಾಡಿದ್ದು ಸಲಹೆ, ಅಭಿಪ್ರಾಯಗಳನ್ನು ಸೂಚಿತ ದಿನಾಂಕದೊಳಗೆ ನೀಡಬಹುದು.

7th State Pay Commission
7 ನೇ ರಾಜ್ಯ ವೇತನ ಆಯೋಗ
author img

By

Published : Feb 5, 2023, 12:48 PM IST

ಬೆಂಗಳೂರು : ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಸೇರಿದಂತೆ ಇತರರ ವೇತನ, ತುಟ್ಟಿ ಭತ್ಯೆ ಹಾಗೂ ಇತರ ಸೌಲಭ್ಯಗಳನ್ನು ಪರಿಶೀಲಿಸಿ ಪರಿಷ್ಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ರಚಿಸಿರುವ 7 ನೇ ರಾಜ್ಯ ವೇತನ ಆಯೋಗವು ಪ್ರಶ್ನಾವಳಿಗಳನ್ನು ಬಿಡುಗಡೆ ಮಾಡಿದೆ. ಫೆ.10 ರೊಳಗಾಗಿ ಸಾರ್ವಜನಿಕರು ಈ ಕುರಿತು ಸಲಹೆ ಹಾಗೂ ಅಭಿಪ್ರಾಯಗಳನ್ನು ನೀಡಬಹುದು ಎಂದು ಹೇಳಿದೆ.

ಸರ್ಕಾರಿ ನೌಕರರು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಯ ವೇತನ, ತುಟ್ಟಿ ಭತ್ಯೆ ಹಾಗೂ ಇತರ ಸೌಲಭ್ಯಗಳ ಬಗ್ಗೆ ವರದಿ ನೀಡಲು ವೇತನ ಆಯೋಗ ರಚಿಸಲಾಗಿದೆ. ಆಯೋಗವು ಈ ಕುರಿತು ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘ ಸಂಸ್ಥೆ, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯಲು ಜನವರಿ 17ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಶ್ನಾವಳಿಗಳನ್ನು ಪ್ರಕಟಿಸಿತ್ತು.

ಈ ಪ್ರಶ್ನಾವಳಿಗಳು 7spc.Karnataka.gov.in ವೆಬ್‌ಸೈಟ್‌ನಲ್ಲೂ ಪ್ರಕಟಿಸಿದ್ದು, ಪ್ರಶ್ನಾವಳಿಗಳಿಗೆ ಉತ್ತರ, ಪ್ರತಿಕ್ರಿಯೆ ಅಥವಾ ಸಲಹೆಗಳನ್ನು ಫೆ.10ರ ಒಳಗಾಗಿ ನೀಡಬಹುದು. ಸಲಹೆ-ಸೂಚನೆ ನೀಡುವವರು 7 ನೇ ರಾಜ್ಯ ವೇತನಾ ಆಯೋಗ, 3ನೇ ಮಹಡಿ, ಹಳೆಯ ಕಲ್ಲುಕಟ್ಟಡ, ಔಷಧ ನಿಯಂತ್ರಣ ಇಲಾಖೆ, ಅರಮನೆ ರಸ್ತೆ, ಬೆಂಗಳೂರು-560001 ಇಲ್ಲಿಗೆ ಪತ್ರ ಬರೆಯಬಹುದು. ಅಥವಾ ದೂ.ಸಂಖ್ಯೆ 080-299070055 ಅಥವಾ ಇ ಮೇಲ್ ವಿಳಾಸ - spcgok@gmail.com ಮೂಲಕವೂ ಸಲ್ಲಿಸಬಹುದು ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ಸರ್ಕಾರವು ರಾಜ್ಯ ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ಅವರಿಗೆ ಹೊಸ ವೇತನ ರಚನೆಯನ್ನು ಶಿಫಾರಸು ಮಾಡಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿದೆ. ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಸಿಬ್ಬಂದಿ ನಡುವಿನ ಹುದ್ದೆಗಳ ಸಮಾನತೆಯನ್ನು ನಿರ್ಧರಿಸುವ ಮೂಲಕ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಆಯೋಗವನ್ನು ಕೋರಲಾಗಿತ್ತು.

ಆಯೋಗದ ನಂತರ ನಿವೃತ್ತಿ ವೇತನ, ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವೈದ್ಯಕೀಯ ಸೌಲಭ್ಯ ಮತ್ತು ಇತರೆ ಸೌಲಭ್ಯಗಳಿಗೆ ಸಂಬಂಧಿಸಿದಂತೆಯೂ ಅವಶ್ಯವಿರುವ ಬದಲಾವಣೆಗಳ ಕುರಿತು ಶಿಫಾರಸು ಮಾಡುವಂತೆ ಆಯೋಗಕ್ಕೆ ಸೂಚಿಸಿತ್ತು. ಶಿಫಾರಸು ಮಾಡುವ ಸಂದರ್ಭದಲ್ಲಿ ರಾಜ್ಯದ ಸಂಪನ್ಮೂಲಗಳು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾದ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ನಿಯಂತ್ರಕ ಕಾರ್ಯಗಳು, ಋಣ ಸೇವಾ ನಿರ್ವಹಣೆಗಳು ಮತ್ತು ಇತರೆ ಅಭಿವೃದ್ಧಿಯೇತರ ಅಗತ್ಯಗಳನ್ನು ಮತ್ತು ರಾಜ್ಯ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯಮ 2002ರ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಿ ಶಿಫಾರಸು ಮಾಡಬೇಕು.

ಇದನ್ನೂ ಓದಿ: ಆದಾಯ ಮಿರಿ ಆಸ್ತಿ ಗಳಿಕೆ ಆರೋಪ: ಶೀಘ್ರ ವಿಚಾರಣೆಗೆ ಡಿಕೆಶಿ ಪರ ವಕೀಲರಿಂದ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.