ಬೆಂಗಳೂರು: ನಗರ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 84 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಒಂದು ವರ್ಷಕ್ಕಿಂತ ಹೆಚ್ಚು ಒಂದೆ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸುವುದು ವರ್ಗಾವಣೆ ನಿಯಮ ಪದ್ದತಿ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ವರ್ಗಾವಣೆಗೊಳಿಸಿದೆ. ಪೋಸ್ಟಿಂಗ್ ನೀಡಿದ ಸ್ಥಳಕ್ಕೆ ಕೂಡಲೇ ಅಧಿಕಾರ ಸ್ವೀಕರಿಸಿ ಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಇಲಾಖೆಯ ಡೈರಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.