ETV Bharat / state

ದ್ವಿತೀಯ ಪಿಯು ಪರೀಕ್ಷೆಗೆ ಮೊದಲ ದಿನವೇ 8,670 ವಿದ್ಯಾರ್ಥಿಗಳು ಗೈರು: 8 ಮಂದಿ ಡಿಬಾರ್

ರಾಜ್ಯಾದ್ಯಂತ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ 8,670 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ
ದ್ವಿತೀಯ ಪಿಯುಸಿ ಪರೀಕ್ಷೆ
author img

By

Published : Mar 4, 2020, 11:22 PM IST

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಸುಮಾರು 8,670 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಇಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಪರೀಕ್ಷೆ ನಡೆದಿದೆ.‌ ಇತಿಹಾಸ ಪರೀಕ್ಷೆಗೆ 2,76,588 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 2,71,906 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 4,682 ಗೈರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಭೌತಶಾಸ್ತ್ರ ಪರೀಕ್ಷೆಗೆ 1,99,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1,95, 926 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 3,963 ಮಂದಿ ಗೈರಾಗಿದ್ದಾರೆ. ಬೇಸಿಕ್‌ ಮ್ಯಾಥ್ಸ್ ಪರೀಕ್ಷೆಗೆ 8,002 ವಿದ್ಯಾರ್ಥಿಗಳು ನೋಂದಾಯಿಸಿಕೊಂಡು, 7, 977 ಹಾಜರಾಗಿದ್ದಾರೆ. 25 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಟ್ಟಾರೆ 8,670 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನು 8 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.