ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಲಾಗಿದೆ.
ಇಲಾಖೆಯ ಇಬ್ಬರು ಕಾರ್ಯಪಾಲಕ ಎಂಜಿನಿಯರ್ಗಳು ಸೇರಿದಂತೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಸಿವಿಲ್), ಸಹಾಯಕ ಎಂಜಿನಿಯರ್ ಮತ್ತು ಕಿರಿಯ 89 ಎಂಜಿನಿಯರ್‌ಗಳನ್ನು ಸರ್ಕಾರ ವರ್ಗಾಯಿಸಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹೆಸರು ಮುಂದೆ ನಮೂದಿಸಿರುವ ಹುದ್ದೆಗೆ ಮಾರ್ಪಡಿಸಿ/ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಸ್ಥಳಗಳಿಗೆ ಅವರನ್ನು ವರ್ಗಾವಣೆ ಮಾಡಲಾಗಿದೆ.