ಬೆಂಗಳೂರು : ಗ್ರಾಮ ಪಂಚಾಯತ್ ಚುನಾವಣಾ ಮಾರ್ಗಸೂಚಿಯನ್ವಯ ಗ್ರೇಡ್ 1 ಹಾಗೂ ಗ್ರೇಡ್ 2 ತಹಶೀಲ್ದಾರ್ಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆ ಗ್ರೇಡ್ 1 ಹಾಗೂ ಗ್ರೇಡ್ 2 ವೃಂದದ 89 ತಹಶೀಲ್ದಾರ್ರನ್ನ ವರ್ಗಾವಣೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಮಾರ್ಗಸೂಚಿಗಳನ್ವಯ ಸರ್ಕಾರ ಈ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡಿರುವ ಅಧಿಕಾರಿಗಳನ್ನು ಈ ಕೂಡಲೇ ಬಿಡುಗಡೆಗೊಳಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಕೂಡಲೇ ಸರ್ಕಾರದ ಸೂಚಿಸಿದ ಜಾಗದಲ್ಲಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಇಲ್ಲವಾದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಎಚ್ಚರಿಸಿದೆ.