ಬೆಂಗಳೂರು: ರಾಜ್ಯದಲ್ಲಿಂದು 9,366 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,94,356 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು 1,03,631 ಸಕ್ರಿಯ ಪ್ರಕರಣಗಳಿದ್ದು, ಇಂದು 7,268 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 3,83,077 ಆಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ.
ಐಸಿಯುನಲ್ಲಿ 806 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಬೆಂಗಳೂರಿನ 3,799 ಮಂದಿಯಲ್ಲಿ ಇಂದು ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 34 ಮಂದಿ ಮೃತಪಟ್ಟಿದ್ದಾರೆ.