ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾಗೆ 94 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 7,161ಕ್ಕೆ ಏರಿಕೆ ಆಗಿದೆ. 19 ಜನರು ಅನ್ಯಕಾರಣಕ್ಕೆ ಮೃತಪಟ್ಟಿದ್ದಾರೆ. ಇಂದು 9,140 ಮಂದಿಗೆ ಸೋಂಕು ದೃಢಪಟ್ಟಿದ್ದು, 9,557 ಮಂದಿ ಗುಣಮುಖರಾಗಿವ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿದ್ದು, 3,44,556 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 97,815 ಸಕ್ರಿಯ ಪ್ರಕರಣಗಳಿದ್ದು, 795 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಮಾನ ನಿಲ್ದಾಣದಲ್ಲಿ 427 ಪ್ರಯಾಣಿಕರು ತಪಾಸಣೆಗೊಳಪಟ್ಟಿದ್ದಾರೆ. ಸೋಂಕಿತರ ಸಂಪರ್ಕದಲ್ಲಿ 5,97,099 ಪ್ರಾಥಮಿಕ ಹಾಗೂ 5,40,113 ದ್ವಿತೀಯ ಸಂಪರ್ಕಿತರಾಗಿದ್ದಾರೆ. 5,00,879 ಹೋಂ ಕ್ವಾರೆಂಟೈನ್ನಲ್ಲಿದ್ದಾರೆ. ಒಂದೇ ದಿನ 63,583 ಮಂದಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಪರೀಕ್ಷಿತರ ಸಂಖ್ಯೆ 37,14,402ಕ್ಕೆ ಏರಿಕೆಯಾಗಿದೆ.