ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 17,784 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 968 ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಏರಿಳಿತ ಆಗುತ್ತಲೇ ಇದೆ. ಇಂದು 337 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯತನಕ ಒಟ್ಟು 39,21,387 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ.
ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 4,918 ಕ್ಕೇರಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 5.44 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 3.69 ರಷ್ಟಿದೆ. ಇಲ್ಲಿಯವರೆಗೆ ಪರೀಕ್ಷಿಸಲಾದ ಒಟ್ಟು ಸಂಖ್ಯೆ 6,69,36,602. ವಾರದ ಸಾವಿನ ಪ್ರಮಾಣ ಶೇ. 0.03 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 5,995 ಮಂದಿ ಒಳಗಾಗಿದ್ದಾರೆ. ಇದುವರೆಗೆ ಒಟ್ಟು 11,26,715 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.
ಇದನ್ನೂ ಓದಿ: ತೆಂಗಿಗೆ ನುಸಿ ರೋಗ ಬಾಧೆ, ನಷ್ಟದಲ್ಲಿ ರಾಮನಗರ ಜಿಲ್ಲೆ ಬೆಳೆಗಾರರು
ಬೆಂಗಳೂರಿನಲ್ಲಿ ಇಂದು 887 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಪ್ರಮಾಣ ಕೊಂಚ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 18,01,302ಕ್ಕೇರಿದೆ. ಇಂದು 293 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,79,652 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸಾವಿನ ಸಂಖ್ಯೆ ಶೂನ್ಯವಿದೆ. ಇಲ್ಲಿಯತನಕ ಒಟ್ಟು 16,967 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,682 ಇದೆ.