ಬೆಂಗಳೂರು: ಮುದ್ದಾಗಿ ಬೆಳೆಸಿದ್ದ ಮಗನನ್ನು ಶಾಲೆಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ಮನನೊಂದ ಬಾಲಕ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ರಾಹುಲ್(11) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಗೋಪಾಲ ನಗರದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಹುಲ್, ನಿನ್ನೆ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದ. ಇದಕ್ಕೆ ಪೋಷಕರು ಮಗನನ್ನು ಬೈಯ್ದು ಬುದ್ದಿವಾದ ಹೇಳಿ ಕೆಲಸಕ್ಕೆ ತೆರಳಿದ್ದಾರೆ. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.