ಬೆಂಗಳೂರು: ಚಲಿಸುತ್ತಿದ್ದ ಕಾರು ಇದ್ದಕ್ಕಿದ್ದಂತೆ ಅಗ್ನಿಯ ಕೆನ್ನಾಲಿಗೆಗೆ ತುತ್ತಾದ ಘಟನೆ ಮೆಜೆಸ್ಟಿಕ್ ಬಳಿ ನಡೆದಿದೆ.
ಬೆಳಗ್ಗಿನ ಜಾವ 5 ಗಂಟೆಗೆ ಮಾರುತಿ ರಿಡ್ಜ್ ಕಾರಿನ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗುಲಿದೆ. ತಕ್ಷಣ ಚಾಲಕ ಎಚ್ಚೆತ್ತು ಕಾರು ನಿಲ್ಲಿಸಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಂದು ಬೆಂಕಿ ನಂದಿಸಿದ್ದಾರೆ.
ಉಪ್ಪಾರಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.