ETV Bharat / state

ಸಿಎಂ-ಡಿಸಿಎಂರನ್ನು ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿ ವಿರುದ್ಧ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - ಮುಖ್ಯಮಂತ್ರಿ ಸಿದ್ದರಾಮಯ್ಯ

ಸೋಷಿಯಲ್​ ಮೀಡಿಯಾದಲ್ಲಿ ಸಿಎಂ ಹಾಗೂ ಡಿಸಿಎಂ ಅವರನ್ನು ನಿಂದಿಸಿದ್ದ ವ್ಯಕ್ತಿ ವಿರುದ್ಧ ದೂರು ದಾಖಲು.

ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

author img

By ETV Bharat Karnataka Team

Published : Oct 28, 2023, 7:50 PM IST

Updated : Oct 28, 2023, 8:14 PM IST

ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಆನೇಕಲ್ (ಬೆಂಗಳೂರು): ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸುಂಕತಣ್ಣೂರು ಗ್ರಾಮದ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಯನ್ನು ನಿಂದಿಸಿರುವುದನ್ನು ಖಂಡಿಸಿ ವ್ಯಕ್ತಿಯನ್ನು ಬಂಧಿಸುವಂತೆ ಎಲೆಕ್ಟ್ರಾನಿಕ್​ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟದಾಸನಪುರ ಸುಂದರೇಶ್​ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ಬೆಟ್ಟದಾಸನಪುರದ 'ಮೀಟರ್ ಈಸ್ ಮೈ ರೈಟ್' ಎಂಬ ವಾಟ್ಸಪ್ ಗ್ರೂಪ್​ನಲ್ಲಿ ಶ್ರೀನಿವಾಸ್ ಎಂಬುವರು ಆ ವ್ಯಕ್ತಿಯ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ಗ್ರೂಪ್​ನಲ್ಲಿ ಮಹಿಳೆಯರು, ಮಕ್ಕಳು ಸಭ್ಯ ಹಿರಿಯ ನಾಗರೀಕರಿದ್ದಾರೆ. ಇಡೀ ವಿಡಿಯೋ ಹೇಳಿಕೆಯಲ್ಲಿ ಅಸಂವಿಧಾನಿಕ ಪದ ಬಳಕೆಯಿದೆ. ಹೀಗಾಗಿ ಈ ವಿಡಿಯೋವನ್ನು ಹಂಚಿಕೊಂಡ ಶ್ರೀನಿವಾಸ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ ಮಂಡ್ಯದ ಆ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಸುಂದರೇಶ್ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಹಾಗು ಡಿಸಿಎಂ ಡಿಕೆ ಶಿವಕುಮಾರ್​ ರಾಜ್ಯದ ಜನತೆಗೆ ತಂದಿರುವ ಗೃಹಜ್ಯೋತಿ ಯೋಜನೆ ಇನ್ನಿತರೆ ಯೋಜನೆಗಳ ಬಗ್ಗೆ ಬಾಯಿ ಹರಿಬಿಟ್ಟಿದ್ದು ಕಾಂಗ್ರೆಸ್ ಈ ಕುರಿತು ಗಂಭೀರವಾಗಿ ಪರಿಗಣಿಸಿದೆ ಎಂದು ಸುಂದರೇಶ್ ತಿಳಿಸಿದರು. ಈ ಹಿಂದೆ ರಾಹುಲ್ ಗಾಂಧಿ ಕೋಲಾರದಲ್ಲಿ ಮಾತನಾಡಿದ ಮಾತನ್ನು ನೆಪವಿಟ್ಟುಕೊಂಡು ಸಂಸದ ಸ್ಥಾನದಿಂದ ಅವರನ್ನು ವಜಾಗೊಳಿಸಿದ್ದರು. ಆದರೆ ಇತ್ತೀಚೆಗೆ ಇಂತಹ ಕೆಟ್ಟ ಸಂಸ್ಕೃತಿಯನ್ನು ಸಹಿಸಲು ಅಸಾಧ್ಯ. ಹೀಗಾಗಿ ಆ ವ್ಯಕ್ತಿಯನ್ನು ಹಾಗು ಅದನ್ನು ಹಂಚಿಕೊಂಡ ಶ್ರೀನಿವಾಸ್​ನನ್ನು ಬಂಧಿಸಬೇಕೆಂದು ದೂರು ನೀಡಿದ್ದಾರೆ.

ಪ್ರತ್ಯೇಕ ಪ್ರಕರಣ.. ಇನ್ನು, ನಿನ್ನೆಯಷ್ಟೇ ಸಿಎಂ ಎಂಬ ಪದದ ಅರ್ಥವನ್ನು ಬದಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಮಫಲಕ ಎಡಿಟ್ ಮಾಡಿ ಫೇಸ್​ಬುಕ್​ನಲ್ಲಿ ಅಪ್‌ಲೋಡ್ ಮಾಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ​ ದಾಖಲಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಫೋಟೊ ಮುಂದೆ ಹಾಗೂ ಗೃಹಕಚೇರಿ ಕಾವೇರಿ ನಿವಾಸದ ಗೇಟ್‌ನಲ್ಲಿ ‘ಕಲೆಕ್ಷನ್ ಮಾಸ್ಟರ್ ಸಿದ್ದರಾಮಯ್ಯ’ ಎಂದು ಎಡಿಟ್ ಮಾಡಿ, ಆ ಪೋಸ್ಟ್​ಅನ್ನು ಹರೀಶ್ ಪೂಂಜ ಪ್ರೊಫೈಲ್ ಫೋಟೋ ಇರುವ ಫೇಸ್​ಬುಕ್​ನಲ್ಲಿ ಅಪ್​ಲೋಡ್​ ಮಾಡಲಾಗಿತ್ತು. ಈ ವಿಚಾರವಾಗಿ ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್​​ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಾರಣ ಪೂಂಜ ವಿರುದ್ಧ ಐಪಿಸಿ ಸೆಕ್ಷನ್​ 1869 U/S 504, 505(2) ಅಡಿಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: ಸಿಎಂ ನಾಮಫಲಕ ಎಡಿಟ್‌ ಮಾಡಿ ಫೇಸ್‌ಬುಕ್‌ ಪೋಸ್ಟ್‌: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್

Last Updated : Oct 28, 2023, 8:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.