ETV Bharat / state

ಬೆಳಗಾವಿಯಲ್ಲಿ ಬೃಹತ್ ಆಟೊಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಸಿಎಂ ಬೊಮ್ಮಾಯಿ ಭರವಸೆ

ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹಾಗೂ ಶಾಸಕ ಅಭಯ್ ಪಾಟೀಲ ನೇತೃತ್ವದ ಬೆಳಗಾವಿ ವಾಣಿಜ್ಯೋದ್ಯಮಿಗಳ ನಿಯೋಗವು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಕುರಿತಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿತು.

A delegation of Belgaum entrepreneurs met the CM
ಬೆಳಗಾವಿ ವಾಣಿಜ್ಯೋದ್ಯಮಿಗಳ ನಿಯೋಗವು ಸಿಎಂಗೆ ಭೇಟಿ
author img

By

Published : Nov 24, 2022, 7:18 PM IST

ಬೆಂಗಳೂರು: ಬೆಳಗಾವಿಯಲ್ಲಿ ಬೃಹತ್ ಆಟೊಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ್ ಪಾಟೀಲ ನೇತೃತ್ವದ ಬೆಳಗಾವಿಯ ವಾಣಿಜ್ಯೋದ್ಯಮಿಗಳ ನಿಯೋಗದೊಂದಿಗೆ ಬೆಳಗಾವಿಯ ಅಭಿವೃದ್ಧಿ ಕುರಿತ ವಿವಿಧ ವಿಷಯ ಕುರಿತು ಸಿಎಂ ಚರ್ಚಿಸಿದರು.

ಬೆಳಗಾವಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಹಾಗೂ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಉದ್ಯಮ ಸ್ಥಾಪನೆಯಿಂದ ಕೈಗಾರಿಕಾ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಫೌಂಡ್ರಿ ಪಾರ್ಕ್ : ಬೆಳಗಾವಿಯಲ್ಲಿ ಫೌಂಡ್ರಿ ಮತ್ತು ಹೈಡ್ರಾಲಿಕ್ಸ್ ಉದ್ಯಮಗಳಿಗೆ ಉತ್ತೇಜನ ನೀಡಲು ಫೌಂಡ್ರಿ ಪಾರ್ಕ್ ಸ್ಥಾಪಿಸುವಂತೆ ನಿಯೋಗವು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಭೂಮಿ ಗುರುತಿಸಿ, ಸ್ವಾಧೀನ ಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದಲ್ಲದೇ ಎಂಎಸ್ಎಂಇ ಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ವಿಧಿಸುವ ಶುಲ್ಕ ರಾಜ್ಯದಲ್ಲಿ ಕಡಿಮೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಎಸ್ಐಸಿ ಆಸ್ಪತ್ರೆ: ಬೆಳಗಾವಿ ಜಿಲ್ಲೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆ ಸ್ಥಾಪಿಸುವ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ ಸಿಎಂ, ಮುಂಬೈ ಚೆನ್ನೈ ಕಾರಿಡಾರ್​​​ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಟೌನ್ ಷಿಪ್ ರಚಿಸಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿ ಕಿತ್ತೂರು ಧಾರವಾಡ ರೈಲುಮಾರ್ಗ: ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಿ ಬೆಳಗಾವಿ - ಕಿತ್ತೂರು - ಧಾರವಾಡ ರೈಲುಮಾರ್ಗ ಯೋಜನೆಯನ್ನು ಮೊದಲ 5 ಆದ್ಯತೆಯ ಯೋಜನೆಗಳಲ್ಲಿ ಪರಿಗಣಿಸುವಂತೆ ಕೇಂದ್ರ ರೈಲ್ವೆ ಸಚಿವರನ್ನು ಕೋರಲಾಗಿದೆ. ಸರ್ಕಾರ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಇಂಟೆಗ್ರೇಟೆಡ್ ಟೆಕ್ಸ್ಟೈಲ್ ಉದ್ಯಮ ಸ್ಥಾಪಿಸಲು ಮುಂದೆ ಬರುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಬೆಳಗಾವಿಯ ಕೈಗಾರಿಕೋದ್ಯಮ ಬೆಳವಣಿಗೆ ಕುರಿತಂತೆ ಬೆಳಗಾವಿಗೆ ಭೇಟಿ ನೀಡಿದಾಗ ಉದ್ಯಮಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.

ಇದನ್ನೂ ಓದಿ:ಗಡಿ ವಿವಾದ.. ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಬಗ್ಗೆ ಸರ್ವಪಕ್ಷ ಸಭೆ ಕರೆದು ನಿರ್ಧಾರ: ಸಿಎಂ ಬೊಮ್ಮಾಯಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.