ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು, ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಭೇಟಿ ನೀಡಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಉಪ ಸಭಾಪತಿ ಪ್ರಾಣೇಶ್, ಶಾಸಕರಾದ ಎಂ.ಪಿ ಕುಮಾರಸ್ವಾಮಿ, ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರಿದ್ದ ನಿಯೋಗ ಮುಖ್ಯಮಂತ್ರಿಗಳ ಜೊತೆ ಕೆಲ ಕಾಲ ಮಾತುಕತೆ ನಡೆಸಿತು.
ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಮಂಜೂರು, ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ಮನವಿ ಮಾಡಿತು.
ಇತ್ತೀಚೆಗೆ ಸಿ.ಟಿ ರವಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ಇದೀಗ ಆ ಅಸಮಾಧಾನ ಬದಿಗೊತ್ತಿ ಅವರ ಜೊತೆಯೇ ಸಿಎಂ ಭೇಟಿಯಾದರು. ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಒಗ್ಗಟ್ಟಿನ ಪ್ರದರ್ಶನ ಮಾಡಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ