ಬೆಂಗಳೂರು: ಇತ್ತೀಚೆಗೆ ಬ್ರೈನ್ ಹೆಮರೇಜ್ನಿಂದಾಗಿ ಕೋಮಾಗೆ ತಲುಪಿ ಮೆದುಳು ನಿಷ್ಕ್ರಿಯವಾಗಿದ್ದ ವಿಕಾಸ್ ಎಂಬುವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ.

ಈ ಮೂಲಕ 30 ವರ್ಷದ ಯುವಕ ವಿಕಾಸ್ ಮೃತಪಟ್ಟರೂ ಆರು ಜನರಿಗೆ ಮರುಜೀವ ನೀಡಿದ್ದಾರೆ. ವಿಕಾಸ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ದಿ. ಶಶಿಕಲಾ ಅವರ ಪುತ್ರ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಂಗಾಂಗಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 'ಜೀವ ಸಾರ್ಥಕತೆ' ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಗೊರಗುಂಟೆ ಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಗೆ ವಿಕಾಸ್ರನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಕೋಮಾಗೆ ತಲುಪಿದ್ದರು. ಎಷ್ಟೇ ಸೂಕ್ತ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದರು.