ನವದೆಹಲಿ/ಬೆಂಗಳೂರು: ಇಂದು ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದರು.
ಇಂದು ಕರ್ನಾಟಕ ಭವನಕ್ಕೆ ಸಿಎಂ ಆಗಮಿಸಿದ್ದ ಅವರು ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ, ಹೈಕಮಾಂಡ್ ತೆಗೆದುಕೊಂಡ ತೀರ್ಮಾನದ ಪ್ರಕಾರ ಸಚಿವ ಸಂಪುಟ ವಿಸ್ತರಿಸಲಾಗುವುದು ಮಾಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಇನ್ನು ನಮ್ಮ ರಾಜ್ಯ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.