ETV Bharat / state

ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವಲು ಬಿಜೆಪಿ ಮುಂದಾಗಿದೆ : ಉಗ್ರಪ್ಪ

author img

By

Published : May 21, 2020, 5:45 PM IST

ರಾಜ್ಯದ ವಿಕೇಂದ್ರೀಕರಣ ವ್ಯವಸ್ಥೆಯನ್ನ ಅತ್ಯಂತ ವ್ಯವಸ್ಥಿತವಾಗಿ ಹಾಳುಗೆಡವಲು ಬಿಜೆಪಿ ಮುಂದಾಗಿದೆ ಎಂದು ಮಾಜಿ ಸಂಸದ ಉಗ್ರಪ್ಪ ಕಿಡಿ ಕಾರಿದ್ದಾರೆ.

A former MP ugrappa  spoke out against the BJP
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡವಲು ಬಿಜೆಪಿ ಮುಂದಾಗಿದೆ : ಉಗ್ರಪ್ಪ

ಬೆಂಗಳೂರು : ಗ್ರಾಮ ಪಂಚಾಯಿತಿಗಳಿಗೆ ಬಿಜೆಪಿ ಕಾರ್ಯಕರ್ತರನ್ನು ನಾಮನಿರ್ದೇಶನ ಗೊಳಿಸಲು ಹೊರಟಿರುವುದು ಎಷ್ಟು ಸೂಕ್ತ ಎಂದು ಮಾಜಿ ಸಂಸದ ಉಗ್ರಪ್ಪ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ ವಿಕೇಂದ್ರೀಕರಣ ವ್ಯವಸ್ಥೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಳುಗೆಡವಲು ಬಿಜೆಪಿ ಮುಂದಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹಾಳು ಮಾಡಲು ಆರ್​​ಎಸ್​​ಎಸ್​​​ ಹಾಗೂ ಬಿಜೆಪಿಯ ಕಾರ್ಯಕರ್ತರನ್ನು ನಾಮ ನಿರ್ದೇಶನ ಮಾಡಲು ಮುಂದಾಗಿರುವುದು ಎಷ್ಟು ಸರಿ?. 6024 ಗ್ರಾಮ ಪಂಚಾಯಿತಿಗಳು ರಾಜ್ಯದಲ್ಲಿದ್ದು, ಇಲ್ಲಿನ ಎಲ್ಲ ಸದಸ್ಯರು ಪಕ್ಷಾತೀತವಾಗಿ ಆಯ್ಕೆಯಾಗಿದ್ದಾರೆ. ಯಾವುದೇ ಪಕ್ಷದ ಚಿನ್ಹೆ ಮೇಲೆ ಆಯ್ಕೆಯಾದವರಲ್ಲ.

ಅಲ್ಲಿಗೆ ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಾಮ ನಿರ್ದೇಶನಗೊಳಿಸುವುದು ಎಷ್ಟು ಸರಿ? ಬಿಜೆಪಿಗೆ ಸಂವಿಧಾನದ ಬಗ್ಗೆ ಹಾಗೂ ವಿಕೇಂದ್ರಿಕರಣದ ಬಗ್ಗೆ ಗೌರವವಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಗೌರವವಿದ್ದರೆ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕು. ಚುನಾವಣೆ ಆಗೋವರೆಗೂ ಈಗಿರುವ ಸಮಿತಿಯನ್ನು ಮುಂದುವರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದರು.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ತುರ್ತು ನಿರ್ಣಯವನ್ನು ಪಾಲಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಿಳಿಸಿದ್ದಾರೆ. ಇದು ರಾಜ್ಯದ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಿಜೆಪಿ ಹೇಗೆ ಹಾಳು ಮಾಡಲು ಹೊರಟಿದೆ ಎನ್ನುವುದನ್ನು ತಿಳಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.