ಕೋವಿಡ್ ವಿರುದ್ಧ ಗೆದ್ದು ಬಂದ ಹೆಚ್.ಎಸ್.ದೊರೆಸ್ವಾಮಿ - ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇವರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
104 ವರ್ಷ ವಯಸ್ಸಿನ ದೊರೆಸ್ವಾಮಿಯವರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೋವಿಡ್ ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಕೋವಿಡ್ ಗೆದ್ದು ಬಂದಿರುವ ಈ ಹಿರಿಯ ಜೀವ ಇತರೆ ರೋಗಿಗಳಿಗೆ ಧೈರ್ಯ ತುಂಬುವಂತಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ವೈದ್ಯರು ಮತ್ತು ಸಿಬ್ಬಂದಿ ಬಹಳ ಕಾಳಜಿಯಿಂದ ಅವರನ್ನು ನೋಡಿಕೊಂಡು ಕೋವಿಡ್ ವಿರುದ್ಧ ಗೆಲುವಿಗೆ ಸಹಕರಿಸಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
TAGGED:
a freedom fighter Doreswamy