ETV Bharat / state

ಪೆಟ್ರೋಲ್ ಬಂಕ್‌ನಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನ: ಕೇರಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರಿನ ಪೆಟ್ರೋಲ್ ಬಂಕ್‌ನಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಕೇರಳ ಮೂಲದ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

a-man-arrested-for-circulating-fake-currency-in-bengaluru
ಪೆಟ್ರೋಲ್ ಬಂಕ್‌ನಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನ : ಕೇರಳ ಮೂಲದ ವ್ಯಕ್ತಿಯ ಬಂಧನ
author img

By

Published : Nov 16, 2022, 10:48 PM IST

ಬೆಂಗಳೂರು: ಪೆಟ್ರೋಲ್ ಬಂಕ್‌ಗಳಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಖಿಲ್ ಜಾರ್ಜ್(28) ಬಂಧಿತ ಆರೋಪಿಯಾಗಿದ್ದು, ಈತನಿಂದ 22,500 ರೂ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಎಂಬುದಾಗಿ ವಿಚಾರಣೆಯಿಂದ ತಿಳಿದು ಬಂದಿದೆ.

ಪೆಟ್ರೋಲ್ ಬಂಕ್‌ನಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನ : ಕೇರಳ ಮೂಲದ ವ್ಯಕ್ತಿಯ ಬಂಧನ

ನ.1ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಲಾಲ್‌ಬಾಗ್ ಮುಖ್ಯ ರಸ್ತೆಯಲ್ಲಿರುವ ಎಸ್.ಎಂ.ಕಣ್ಣಪ್ಪ ಆಟೋ ಮೊಬೈಲ್ಸ್ ಎಂಬ ಪೆಟ್ರೋಲ್ ಬಂಕ್‌ಗೆ ಬಂದಿದ್ದ ಆರೋಪಿ 900ರೂ ಪೆಟ್ರೋಲ್ ಹಾಕಿಸಿಕೊಂಡಿದ್ದ. ಬಳಿಕ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ 500 ರೂ. ಒಂದು ನೋಟು ಹಾಗೂ 100 ರೂ. ನಾಲ್ಕು ನೋಟುಗಳನ್ನು ನೀಡಿದ್ದ.

ಆದರೆ, ನೋಟುಗಳ ಪೈಕಿ 500 ರೂ. ನೋಟು ತೆಳುವಾಗಿರುವುದನ್ನು ಕಂಡ ಸಿಬ್ಬಂದಿ ತನ್ನ ಬಳಿಯಿದ್ದ ನೋಟು ತೆಗೆದು ಹೋಲಿಕೆ ಮಾಡಿ ನೋಡಿದಾಗ ವ್ಯತ್ಯಾಸ ಕಂಡು ಬಂದಿದೆ.

ತಕ್ಷಣ ಬಂಕ್ ಸಿಬ್ಬಂದಿ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಕಾರು ಸಮೇತ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಯಿಂದ 22,500 ರೂ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ : ಮಹಿಳಾ ರೋಗಿಗಳ ಬಟ್ಟೆ ಬಿಚ್ಚಿಸಿ ವಿಡಿಯೋ ಮಾಡಿದ ಆರೋಪ: ವೈದ್ಯ ಅರೆಸ್ಟ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.