ದೊಡ್ಡಬಳ್ಳಾಪುರ: ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ 70 ವರ್ಷದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ ಮೃತ ವೃದ್ಧ.
ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧನಿಗೆ ಹೃದಯಾಘಾತ: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಜನಸ್ಪಂದನ ಸಮಾವೇಶದಲ್ಲಿ ಇವರು ಭಾಗವಹಿಸಿದ್ದರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಇವರಿಗೆ ಹೃದಯಾಘಾತವಾಗಿತ್ತು ತಕ್ಷಣವೇ ಅವರನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರದಲ್ಲಿ ನಡೆದ ಸರ್ಕಾರದ ಮೂರು ವರ್ಷದ ಸಾಧನೆಯ ಜನಸ್ಪಂದನ ಸಮಾವೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
(ಇದನ್ನೂ ಓದಿ: ತಾಕತ್ತಿದ್ದರೆ ನಮ್ಮ ಗೆಲುವು ತಡೆಯಿರಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಗೆ ಸಿಎಂ ಸವಾಲು)