ETV Bharat / state

ಬೆಂಗಳೂರಿನಲ್ಲೂ ಮಂಕಿಪಾಕ್ಸ್ ಗುಣಲಕ್ಷಣ ಹೊಂದಿರುವ ವ್ಯಕ್ತಿ ಪತ್ತೆ - etv bharat kannada

ಬೆಂಗಳೂರಿನಲ್ಲಿ ಮಂಕಿಪಾಕ್ಸ್ ವೈರಸ್​​ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿದ್ದಾನೆ. ಸ್ಯಾಂಪಲ್ ಅನ್ನು ಪುಣೆಯ ಎನ್.ಐ.ವಿ(ರಾಷ್ಟ್ರೀಯ ವೈರಾಲಜಿ ಸಂಸ್ಥೆ) ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

a-man-with-monkeypox-symptoms-found-in-bengaluru
ಸಿಲಿಕಾನ್ ಸಿಟಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಹೊಂದಿರುವ ವ್ಯಕ್ತಿ ಪತ್ತೆ...!
author img

By

Published : Jul 30, 2022, 12:19 PM IST

Updated : Jul 30, 2022, 12:25 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣ‌ ಕಂಡು ಬಂದಿದೆ. ಈ ಸಂಬಂಧ ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಷೆ ನೀಡಲಾಗುತ್ತಿದೆ. ಈ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 4ರಂದು ಆಫ್ರಿಕಾ ಖಂಡದ ಇಥಿಯೋಪಿಯಾದಿಂದ ಬೆಂಗಳೂರಿಗೆ ಈ ರೋಗಿ ಬಂದಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಮಾಡಿಸಿಕೊಳ್ಳಲು ಆಗಮಿಸಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪುಣೆಗೆ ಸ್ಯಾಂಪಲ್ ರವಾನೆ: ವ್ಯಕ್ತಿಯ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿದೆ. ಇದರ ಸ್ಯಾಂಪಲ್ ಅನ್ನು ಪುಣೆಯ ಎನ್.ಐ.ವಿ(ರಾಷ್ಟ್ರೀಯ ವೈರಾಲಜಿ ಸಂಸ್ಥೆ) ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ;ಲೈಂಗಿಕ ಸಂಪರ್ಕದಿಂದ ಮಂಕಿಪಾಕ್ಸ್ ಹರಡುತ್ತದಾ? ಇಲ್ಲಿದೆ ಮಾಹಿತಿ

Last Updated : Jul 30, 2022, 12:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.