ETV Bharat / state

ಬೆಂಗಳೂರು: ಕುಡಿದ ಮತ್ತಿನಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವು - A person drunk alcohol

ಬೆಂಗಳೂರಿನಲ್ಲಿ ಮದ್ಯದ ಅಮಲಿನಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

A person death in Bangaluru after drunk alcohol
ಬೆಂಗಳೂರಿನಲ್ಲಿ ಎಣ್ಣೆ ಅಮಲಿನಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
author img

By

Published : May 5, 2020, 5:31 PM IST

ಬೆಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಹೈಗ್ರೌಂಡ್ಸ್ ಠಾಣೆಯ ಹಿಂಭಾಗದಲ್ಲಿರುವ ಶ್ರೀರಾಮ ದೇವಾಲಯದ ಬಳಿ ನಡೆದಿದೆ. ಮೂರ್ತಿ (55) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.

ದೇವಸ್ಥಾನದ ಕಟ್ಟೆ ಬಳಿ ಮದ್ಯ ಸೇವಿಸಿ ಮನೆಯತ್ತ ತೆರಳುತ್ತಿದ್ದ ಮೂರ್ತಿ, ಏಕಾಏಕಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಸ್ಥಳೀಯರು ಕುಡಿದ ಮತ್ತಿನಲ್ಲಿ ಬಿದ್ದಿರಬಹುದೆಂದು ತಿಳಿದು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಆದರೆ, ಪೊಲೀಸರು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿರುವುದು ಗೊತ್ತಾಗಿದೆ.

ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.