ETV Bharat / state

ಎಸ್ಸಿ, ಎಸ್ಟಿ ಮೀಸಲು ಹೆಚ್ಚಳದ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅಸ್ತು

author img

By

Published : Oct 20, 2022, 12:31 PM IST

Updated : Oct 20, 2022, 2:00 PM IST

ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿ ರಾಜ್ಯಪಾಲರಿಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟರ ಮೀಸಲಾತಿ ಏರಿಕೆ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಎಸ್ಸಿ, ಎಸ್ಟಿ ಜಾತಿಯ ಜನಸಂಖ್ಯೆ ಹೆಚ್ಚಾಗಿರುವುದರಿಂದ ಮೀಸಲಾತಿ ಹೆಚ್ಚಳ ಮಾಡಿರುವ ಕಾರಣ ಕೋರ್ಟ್ ತಡೆಯಾಜ್ಞೆ ನೀಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಮೀಸಲಾತಿಗೆ ಅರ್ಹವಾಗಿರುವ ಜಾತಿಗಳ ಸಂಖ್ಯೆ ಏರಿಕೆಯಾಗಿದೆ. ಪರಿಶಿಷ್ಟ ಜಾತಿಯಲ್ಲಿ 6 ಇದ್ದ ಜಾತಿಗಳು ಈಗ 103 ಜಾತಿಗೆ ಹೆಚ್ಚಾಗಿದೆ. ಪರಿಶಿಷ್ಟ ಪಂಗಡದಲ್ಲಿ 2-3 ಇದ್ದ ಜಾತಿ 56 ಜಾತಿಗೆ ಏರಿಕೆಯಾಗಿದೆ. ಅಗತ್ಯಕ್ಕನುಸಾರವಾಗಿ ಮೀಸಲಾತಿ ನೀಡಲು ಸರ್ಕಾರ ಚಿಂತನೆ ಮಾಡಿದೆ. ಮೀಸಲಾತಿ ಹೆಚ್ಚಳ EWS ( Economically weaker Section) ಮಾದರಿಯಲ್ಲಿ ಇರಲಿದೆ ಎಂದು ಸೂಚ್ಯವಾಗಿ ತಿಳಿಸಿದರು.

ಅದಕ್ಕೆ ಸಂವಿಧಾನಾತ್ಮಕರಕ್ಷಣೆ ಇರಲಿದೆ. ನಾವು ಸುಗ್ರೀವಾಜ್ಞೆ ತರುವಾಗ ಸಂವಿಧಾನದ ಪ್ರಕಾರವೇ ಕ್ರಮ ಜರುಗಿಸುತ್ತೇವೆ. ಕೋರ್ಟ್ ನಲ್ಲೂ ನಮಗೆ ರಕ್ಷಣೆ ಸಿಗುವ ವಿಶ್ವಾಸವಿದೆ. ಸಮುದಾಯಗಳ ಹೆಚ್ಚಳ ನಮ್ಮ ಪ್ರಯತ್ನಕ್ಕೆ ಪೂರಕ ಆಗಲಿದೆ. ಆದರೆ, ಮೀಸಲಾತಿಯನ್ನು ಯಾವ ಮೂಲದಿಂದ ಕೊಡ್ತೇವೆ ಅನ್ನೋ ಬಗ್ಗೆ ಸ್ಪಷ್ಟತೆ ನೀಡಿಲ್ಲ‌. ಆದರೆ ಯಾವ ಮೂಲದಿಂದ ಮೀಸಲಾತಿ ಕಿತ್ತು ಕೊಡ್ತಿರಿ..? ಅಂತ ಪ್ರಶ್ನೆಗೆ ಸ್ಪಷ್ಟ ಉತ್ತರ ಕೊಟ್ಟಿಲ್ಲ.

ಸಂಪುಟದ ಇತರ ತೀರ್ಮಾನಗಳೇನು?:

  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು (SWD) ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ರೂ. 1500 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರ್ಕಾರದ ಅನುಮತಿ ನೀಡಿ ದಿನಾಂಕ: 30.05.2022 ರಂದು ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
  • ಜಗಜೀವನ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಡಚ್ ಅಸಿಸ್ಟೆಡ್ ಪ್ರಾಜೆಕ್ಟ್ ಮತ್ತು ಇತರ ಯೋಜನೆಗಳಡಿ ನಿರ್ಮಿಸಿ - ಪರಿಶಿಷ್ಟ ಜಾತಿಯ ಕುಶಲಕರ್ಮಿಗಳಿಗೆ ಹಂಚಿಕೆ ಮಾಡಿರುವ ಕಾರ್ಯಾಗಾರಗಳನ್ನು ವಸತಿ ಫಲಾನುಭವಿಗಳ ಹೆಸರಿಗೆ ನೋಂದಣಿ ಮಾಡಿಕೊಡಲು ಒಪ್ಪಿಗೆ.
  • ಬೆಂಗಳೂರಿನ ಜೆ.ಪಿ.ನಗರದ ಎರಡನೇ‌ ಹಂತದಲ್ಲಿರುವ ತಿರುಮಲ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ಸಂಸ್ಥೆಗೆ ನೀಡಿರುವ 31,215 ಚ.ಅ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಾಗದ ಗುತ್ತಿಗೆ ಅವಧಿಯನ್ನು 1.04.2001 ರಿಂದ ಅನ್ವಯವಾಗುವಂತೆ 30 ವರ್ಷಗಳ ಅವಧಿಗೆ ನವೀಕರಿಸಲು ಒಪ್ಪಿಗೆ.
  • ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ (LHDCP) ಅಡಿ 290 ಸಂಚಾರಿ ಪಶು ಚಿಕಿತ್ಸಾ ಘಟಕದ ವಾಹನಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಸೇವಾ ಪೂರೈಕೆದಾರರ (Service Provider) ಮುಖಾಂತರ ಸೇವೆ ಪಡೆಯಲು ಮತ್ತು ನಿರ್ವಹಿಸಲು ಆಡಳಿತಾತ್ಮಕ ಅನುಮೋದನೆ.
  • ವಿಜಯಪುರ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಏರ್‌ಬಸ್-320 ಮಾದರಿಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು 347.92 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ಹಾಗೂ ಸದರಿ ವಿಮಾನ ನಿಲ್ದಾಣಕ್ಕೆ "ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ” ಎಂದು ನಾಮಕರಣ ಮಾಡಲು ಒಪ್ಪಿಗೆ.
  • ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ 18 ವೈದ್ಯಕೀಯ ಸಂಸ್ಥೆಗಳಿಗೆ ಅಗತ್ಯವಿರುವ ಅನಸ್ತೇಷಿಯಾ ವರ್ಕ್ ಸ್ಟೇಷನ್ ಮತ್ತು ರೋಗಿಯ ನಿಗಾವಹಿಸುವ (Anaesthesia Workstation + Patient Monitor) ಉಪಕರಣಗಳನ್ನು ರೂ. 33.92 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ.
  • ಉಡುಪಿ ಜಿಲ್ಲೆ, ಬೈಂದೂರು ತಾಲ್ಲೂಕು ಪಡುವರಿ ಗ್ರಾಮದ ಸುಬ್ಬರಾಡಿ ಎಂಬಲ್ಲಿ ನೀರು ತಡ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯ ರೂ. 47.47 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ.
  • ಜಲ‌ ಜೀವನ್ ಜೀವನ ಯೋಜನೆಯಡಿ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಲಾಲಂದೇವನಹಳ್ಳಿ ಮತ್ತು ಇತರ 37 ಜನವಸತಿಗಳಿಗೆ ಕುಡಿಯುವ ನೀರು ಯೋಜನೆಯನ್ನು DBOT ಆಧಾರದ ಮೇಲೆ ಒಟ್ಟು 35 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.
  • ಜಲ ಜೀವನ್ ಮಿಷನ್ ಯೋಜನೆಯಡಿ ಹಾಸನ ಜಿಲ್ಲೆಯ ಆಲೂರು, ಬೇಲೂರು, ಹಾಸನ ಮತ್ತು ಸಕಲೇಶಪುರ ತಾಲೂಕುಗಳ 1477 ಬಹುಗ್ರಾಮ ಕುಡಿಯುವ ಗ್ರಾಮೀಣ ಜನವಸತಿಗಳಿಗೆ ನೀರು ಸರಬರಾಜ ಯೋಜನೆಯನ್ನು ರೂ. 855.39 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ.
  • ಜಲ ಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ, ಅಂಜನಾಪುರ ಮತ್ತು ಇತರೆ 198 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBoT ಆಧಾರದ ಮೇಲೆ ರೂ. 313 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ.

ಜಲ ಜೀವನ್‌ ಮಿಷನ್ ಯೋಜನೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಇಳಂತಿಲ ಮತ್ತು ಇತರ 209 ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು DBOT ಆಧಾರದ ಕುಡಿಯುವ ಮೇಲೆ ಒಟ್ಟು ರೂ. 170 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಜಲ ಜೀವನ್ ಮಿಷನ್ ಯೋಜನೆಯಡಿ ಉತ್ತರ ಕನ್ನಡ 22 ಗ್ರಾಮಗಳ (43 ಗುಂಪು ಜನವಸತಿಗಳ) ಹಾಗೂ ಕರವಾಡಿ ಮತ್ತು ಇತರೆ 17 ಗ್ರಾಮಗಳ (42 ಗುಂಪು ಜನವಸತಿಗಳ) (ಒಟ್ಟಾರ 386 ಜನವಸತಿಗಳ) ಸಂಯೋಜಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು DBOT ಆಧಾರದಮೇಲೆ ಒಟ್ಟು ರೂ. 120 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್ 13 ಚಿತ್ರಕ್ಕೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಿದ ಸರ್ಕಾರ..

Last Updated : Oct 20, 2022, 2:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.