ETV Bharat / state

ಸರ್ಕಾರ, ಪ್ರತಿಪಕ್ಷಗಳ ಸಂಘರ್ಷಕ್ಕೆ ವೇದಿಕೆಯಾಗಲಿದೆಯಾ ಬೆಳಗಾವಿ ಅಧಿವೇಶನ? - ಕಬ್ಬು ಬೆಳೆಗಾರರಿಗೆ ಸಿಗದ ನ್ಯಾಯಬೆಲೆ

ರಾಜ್ಯ ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಹಣಾಹಣಿಗೆ ವೇದಿಕೆಯಾಗಲಿದೆ.

Legislature Session Belgaum Suvarnasoudha
ರಾಜ್ಯ ವಿಧಾನಮಂಡಲದ ಅಧಿವೇಶನ ಬೆಳಗಾವಿ ಸುವರ್ಣಸೌಧ
author img

By

Published : Dec 16, 2022, 9:42 PM IST

ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಹಣಾಹಣಿ ನಡೆಯುವುದು ನಿಶ್ಚಿತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಬೀದಿಗಿಳಿದಿದ್ದು, ಈ ಬಾರಿಯ ಅಧಿವೇಶನವೂ ಕೂಡ ಮತ್ತೊಂದು ಕಾಳಗಕ್ಕೆ ವೇದಿಕೆಯಾಗಲಿದೆ.

ವೋಟರ್ ಐಡಿ ಹಗರಣ ಕೆಣಕಲಿದೆ ಪ್ರತಿಪಕ್ಷ: ವೋಟರ್ ಐಡಿ ಹಗರಣ, ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ದೊಡ್ಡ ಸಂಖ್ಯೆಯ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟಿರುವುದು ಸೇರಿದಂತೆ ಹಲವು ವಿಷಯಗಳು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬಾಣ ಪ್ರಯೋಗಿಸಲು ಅಸ್ತ್ರವಾಗಲಿವೆ. ಚಿಲುಮೆ ಸಂಸ್ಥೆಯ ಮೂಲಕ ನಡೆದ ಈ ಹಗರಣದಲ್ಲಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅದರೂ ಅದರ ಹಿಂದೆ ಸರ್ಕಾರದಲ್ಲಿರುವ ಪ್ರಮುಖ ಸಚಿವರೊಬ್ಬರು ಭಾಗೀದಾರರು ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳಲಿವೆ ಎನ್ನಲಾಗಿದೆ.

ಕಬ್ಬು ಬೆಳೆಗಾರರಿಗೆ ಸಿಗದ ನ್ಯಾಯಬೆಲೆ: ಇದೇ ರೀತಿ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಭಯೋತ್ಪಾದಕತೆಯನ್ನು ಸೃಷ್ಟಿಸಿದ್ದು ಬಿಜೆಪಿಯ ಷಡ್ಯಂತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಡಿದ ಆರೋಪ, ಆಡಳಿತಾರೂಢ ಬಿಜೆಪಿಗೆ ಪ್ರಬಲ ಅಸ್ತ್ರವಾಗಿ ಸಿಕ್ಕಿದಂತಾಗಿದೆ. ಈ ಮಧ್ಯೆ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನ್ಯಾಯಯುತ ಬೆಲೆ ನೀಡುತ್ತಿಲ್ಲ ಎಂಬ ವಿಷಯವನ್ನು ಹಿಡಿದುಕೊಂಡು ಪ್ರತಿಪಕ್ಷಗಳು ಸರ್ಕಾರವನ್ನೂ ಇಕ್ಕಟ್ಟಿಗೆ ಸಿಲುಕಿಸಲಿವೆ.

ಗಡಿ ವಿವಾದವೂ ಸದ್ದು: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದವೂ ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿದೆ. ವಿವಾದದ ಬಗ್ಗೆ ಉಭಯ ರಾಜ್ಯಗಳ ನಾಯಕರ ಜತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚರ್ಚಿಸಿದ್ದು, ಈ ಹಿನ್ನೆಲೆಯಲ್ಲಿ ಸದರಿ ವಿವಾದ ತಾತ್ಕಾಲಿಕವಾಗಿ ತಣ್ಣಗಾಗಿದೆ ಆದರೂ,ಅಧಿವೇಶನದ ಮೂಲಕ ಗಡಿ ವಿವಾದ ಕೆದಕುತ್ತಿರುವ ಮಹಾರಾಷ್ಟ್ರಕ್ಕೆ ಎಚ್ಚರಿಕೆಯ ಸಂದೇಶ ರವಾನೆ ಆಗಲಿದೆ ಎಂಬುದು ಮೂಲಗಳು ತಿಳಿಸಿವೆ.

ಭ್ರಷ್ಟಾಚಾರ ಆರೋಪಗಳು ಚರ್ಚೆ: ಈ ಮಧ್ಯೆ ಭಾವನಾತ್ಮಕ ವಿಷಯಗಳನ್ನು ಎತ್ತಿಕೊಂಡು ಬಿಜೆಪಿ ರೂಪಿಸುತ್ತಿರುವ ಹೋರಾಟಗಳ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ತಕರಾರು ಮಾಡುವುದು ನಿಚ್ಚಳವಾಗಿದೆ. ಹಿಂದುತ್ವದ ಹೆಸರಿನಲ್ಲಿ ಜನರನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದು ಸರಿಯಲ್ಲ ಎಂದು ಆಡಳಿತಾರೂಢ ಪಕ್ಷದ ಮೇಲೆ ದಾಳಿ ಮಾಡುವ ಅವಕಾಶವನ್ನು ಕಳೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬಯಸುವುದಿಲ್ಲ. ಈ ಮಧ್ಯೆ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳನ್ನು ಪ್ರತಿಪಕ್ಷಗಳು ಎತ್ತಿ ಹಿಡಿದು ಹೋರಾಡುವುದು ಬಹುತೇಕ ಖಚಿತ ಎನ್ನಲಾಗಿದೆ.

ಮೇಕೆದಾಟು ಮಹದಾಯಿ: ಉತ್ತರ ಕರ್ನಾಟಕ ಭಾಗದಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಆ ಭಾಗದ ಮತದಾರರ ಮೇಲೆ ಪ್ರಭಾವ ಬೀರುವ, ಮುಂದಿನ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಎಲ್ಲ ರಾಜಕೀಯ ಪಕ್ಷಗಳಿಗೆ ಹಲವಾರು ವಿಷಯಗಳಲ್ಲಿ ಪರಸ್ಪರ ಮೇಲಾಟ ನಡೆಸಲು ಕಾರಣವಾಗಲಿದೆ. ಮೇಕೆದಾಟು ಆಣೆಕಟ್ಟು ಯೋಜನೆ, ಮಹದಾಯಿ ಯೋಜನೆಗಳ ಜಾರಿಯಲ್ಲಿ ಆಗುತ್ತಿರುವ ವಿಳಂಬ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಡಬಲ್ ಎಂಜಿನ್ ಸರ್ಕಾರವಿದ್ದರೂ ಏಕೆ ಈ ವಿಷಯದಲ್ಲಿ ಸರ್ಕಾರ ರಾಜ್ಯದ ಹಿತ ಕಾಪಾಡಿಲ್ಲ ಎಂಬ ಆಕ್ರೋಶದ ಮಾತುಗಳು ಪ್ರತಿಪಕ್ಷಗಳಿಂದ ಕೇಳಿಬರಲಿದೆ.

ಪಂಚರತ್ನ ರಥಯಾತ್ರೆ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಭವ ಕಡಿಮೆ. ಜೆಡಿಎಸ್‍ ಶಾಸಕರು ಮಾತ್ರ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಹಾಗಾಗಿ, ಈ ಬಾರಿಯ ನೇರ ಹಣಾಹಣಿ ಆಡಳಿತ ಪಕ್ಷ ಬಿಜೆಪಿ ಹಾಗೂ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆಯಲಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನ ಕುತೂಹಲ ಮೂಡಿಸಿದೆ.

ಇದನ್ನೂಓದಿ:ಮತದಾರರ ಮಾಹಿತಿ ಕಳವು ಪ್ರಕರಣ: ತನಿಖೆಗೆ 12 ಕೆಎಎಸ್ ಅಧಿಕಾರಿಗಳ ನೇಮಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.