ETV Bharat / state

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಕಿಂಗ್ ಮೇಕರ್ ಆಗುವುದೇ ಜೆಡಿಎಸ್‌?

author img

By

Published : May 13, 2023, 6:14 AM IST

ರಾಜ್ಯ ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ಜೆಡಿಎಸ್​ ಪ್ರಬಲ ಪ್ರಾದೇಶಿಕ ಪಕ್ಷವಾಗಿ ಕಿಂಗ್ ಮೇಕರ್ ಆಗಲಿದೆ ಎಂದು ಭವಿಷ್ಯ ನುಡಿದಿದೆ.

ಜೆಡಿಎಸ್‌
ಜೆಡಿಎಸ್‌

ಬೆಂಗಳೂರು : ಮತದಾನದ ನಂತರ ನಡೆದ ಕೆಲ ಸಮೀಕ್ಷೆಗಳಲ್ಲಿ ಕಾಂಗ್ರೆಸ್​ಗೆ ಬಹುಮತ ಬಂದಿದ್ದರೂ, ಇನ್ನೂ ಕೆಲ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ. ಹಾಗಾಗಿ, ಜೆಡಿಎಸ್‌ ಮತ್ತೊಮ್ಮೆ ಕಿಂಗ್ ಮೇಕರ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ.

ಹೀಗಾಗಿ, ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಈಗ ಜೆಡಿಎಸ್‌ ನಿರ್ಣಾಯಕ ಘಟ್ಟದಲ್ಲಿ ಇದೆ. ಒಂದು ವೇಳೆ ಜೆಡಿಎಸ್ ಕಿಂಗ್ ಮೇಕರ್ ಆದರೂ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮತದಾನ ಮುಗಿದ ಬಳಿಕ ಬಿಡುಗಡೆಯಾದ ಎಕ್ಸಿಟ್ ಪೋಲ್​ಗಳು, 2018 ರ ಚುನಾವಣೆಯಲ್ಲಿ ಜೆಡಿಎಸ್‌ ಕಳೆದ ಬಾರಿ ಪಡೆದ ಸ್ಥಾನ ಈ ಬಾರಿ ಬರುವುದಿಲ್ಲ. ಆದರೆ, ರಾಜ್ಯದಲ್ಲಿ ಪ್ರಬಲ ಪ್ರಾದೇಶಿಕ ಪಕ್ಷವಾಗಿ ಕಿಂಗ್ ಮೇಕರ್ ಆಗಲಿದೆ ಎಂದು ಭವಿಷ್ಯ ನುಡಿದಿವೆ. ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಜೆಡಿಎಸ್‌ ಕಿಂಗ್ ಮೇಕರ್ ಆಗುವ ಲಕ್ಷಣಗಳು ಕಾಣುತ್ತಿವೆ.

ಜೆಡಿಎಸ್‌ ನಾಯಕರಿಂದ ಎಚ್ಚರಿಕೆಯ ಹೆಜ್ಜೆ: ಈ ಸಲ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು ಜೆಡಿಎಸ್‌ ದಂಪತಿಗಳಿಗೆ ಪಕ್ಷದ ಭವಿಷ್ಯದ ಚಿಂತೆ ಒಂದೆಡೆಯಾದರೆ, ಮತ್ತೊಂದೆಡೆ ಕಾಂಗ್ರೆಸ್​ಗಿಂತ ಬಿಜೆಪಿ ಸೂಕ್ತ ಎಂಬ ಅನಿಸಿಕೆ ವ್ಯಕ್ತವಾಗಿದೆ. ಒಂದು ವೇಳೆ ಜಾತ್ಯತೀತ ಅಸ್ತ್ರದ ಮೇಲೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದರೂ ಭವಿಷ್ಯದಲ್ಲಿ 'ಆಪರೇಷನ್' ಖಚಿತ ಎನ್ನುವುದು 2018 ರಲ್ಲಿನ ಘಟನೆಗಳೇ ಸಾಕ್ಷಿಯಾಗಿರುವುದು ಗೊತ್ತಿರುವ ಸಂಗತಿ. ಹಾಗಾಗಿ, ಈ ಬಾರಿ ಜೆಡಿಎಸ್‌ ನಾಯಕರು ಎಚ್ಚರಿಕೆ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪರ ನಿಂತರೆ ಜೆಡಿಎಸ್​ಗೆ ಆಗುವ ಲಾಭ, ನಷ್ಟ ಏನು? : ಜಾತ್ಯಾತೀತ ನಿಲುವಿನಲ್ಲಿ ಸ್ಪಷ್ಟತೆ ಸಿಗುತ್ತದೆ. ಜೆಡಿಎಸ್‌ ಬಿಜೆಪಿಯ ಬಿ ಟೀಂ ಅಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಕಾಂಗ್ರೆಸ್ ಜತೆ ಹೋದರೆ ಹಲವು ರೀತಿಯ ಸಮಸ್ಯೆ ಎದುರಿಸಬೇಕಾಗುತ್ತದೆ. ಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರು ಅಸಹಕಾರ ನೀಡಬಹುದು. ಮೈತ್ರಿ ಸರ್ಕಾರಕ್ಕೆ ಬಿಜೆಪಿ ಆಪರೇಷನ್ ಭೀತಿ ಎದುರಾಗುವ ಸಾಧ್ಯತೆ ಇರುತ್ತದೆ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಸಲು ಸಾಧ್ಯವಾಗದಿರಬಹುದು. ಈ ಬಾರಿ ಮುಖ್ಯಮಂತ್ರಿ ಸ್ಥಾನ ಕುಮಾರಸ್ವಾಮಿ ಅವರಿಗೆ ನೀಡಲು ಕಾಂಗ್ರೆಸ್ ನಾಯಕರು ಹಿಂದೇಟು ಹಾಕುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಬಿಜೆಪಿ ಜೊತೆಗೆ ಜೆಡಿಎಸ್‌ ಕೈಜೋಡಿಸಿದರೆ? : ಒಂದು ವೇಳೆ ಬಿಜೆಪಿ ಜೊತೆ ಜೆಡಿಎಸ್‌ ಕೈಜೋಡಿಸಿದರೆ ಬಿಜೆಪಿ ಬಿ ಟೀಂ ಹಣೆಪಟ್ಟಿ ಕಟ್ಟಿಕೊಳ್ಳಬೇಕಾಗುತ್ತದೆ. ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಸಿಗದಿರಬಹುದು. ಬಿಜೆಪಿ - ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಅಲ್ಪಸಂಖ್ಯಾತರ ವಿರೋಧ ಎದುರಿಸಬೇಕಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ಇಬ್ಬರಲ್ಲಿ ಯಾರ ಜೊತೆ ಹೋದರೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರವನ್ನು ದಳಪತಿಗಳು ಹಾಕುತ್ತಿದ್ದು, ನಾಳಿನ ಚುನಾವಣಾ ಫಲಿತಾಂಶದ ನಂತರ ಎಲ್ಲವೂ ನಿರ್ಧಾರವಾಗಲಿದೆ.

ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿ ಬಿಎಸ್​ವೈ : ಆಪ್ತರ ಜೊತೆ ದೋಸೆ ಸವಿದ ಹಿರಿಯ ನಾಯಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.