ಬೆಂಗಳೂರು: ಯುವತಿ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದ ಕಾಮುಕನೋರ್ವ ಜೈಲಿನಿಂದ ಬಂದ ನಂತರ, ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಕ್ಬರ್ ಪಾಷಾ ಎಂಬಾತ ಈ ಕೃತ್ಯವೆಸಗಿರುವ ಆರೋಪಿ. ಅಕ್ಬರ್ ಪಾಷಾ ಹಾಗೂ ಸಂತ್ರಸ್ತೆ ಮೊದಲು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆರೋಪಿ ಪ್ರೀತಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿ ಮದುವೆಯಾಗದೆ ಮೋಸ ಮಾಡಿದ್ದ. ಹೀಗಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಳು. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗೆ ಅಟ್ಟಿದ್ದರು.
ಜೈಲಿಗೆ ಹೋದ ಅಕ್ಬರ್ ಪಾಷಾ ಮತ್ತೆ ಹೊರಗೆ ಬಂದು ಸಂತ್ರಸ್ತೆಯನ್ನು ಮತ್ತೆ ಪ್ರೀತಿಸುವ ನಾಟಕವಾಡಿ ಅತ್ಯಾಚಾರವೆಸಗಿದ್ದಾನೆ. ಹೀಗಾಗಿ ಯುವತಿ ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಸದ್ಯ ಆರೋಪಿ ಎಸ್ಕೇಪ್ ಆಗಿದ್ದು, ಈ ಪ್ರಕರಣ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.