ETV Bharat / state

'ವುಮೆನ್​ ಸೇಫ್ಟಿ' ಆ್ಯಪ್; ಅಪಾಯದ ವೇಳೆ​ ಒಂದು ಬಟನ್​ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ - ಸೈರನ್

ಮಹಿಳೆಯರ ಸುರಕ್ಷತೆಗಾಗಿ ವಿದ್ಯಾರ್ಥಿನಿಯೊಬ್ಬರು ನೂತನ ಅಪ್ಲಿಕೇಶನ್​ವೊಂದನ್ನು ಸಿದ್ಧಪಡಿಸಿದ್ದಾರೆ.

'ವುಮೆನ್​ ಸೇಫ್ಟಿ' ಆ್ಯಪ್​
'ವುಮೆನ್​ ಸೇಫ್ಟಿ' ಆ್ಯಪ್​
author img

By ETV Bharat Karnataka Team

Published : Nov 30, 2023, 8:02 PM IST

Updated : Nov 30, 2023, 11:10 PM IST

'ವುಮೆನ್​ ಸೇಫ್ಟಿ' ಆ್ಯಪ್; ಅಪಾಯದ ವೇಳೆ​ ಒಂದು ಬಟನ್​ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ

ಬೆಂಗಳೂರು: ನೀವೇನಾದರೂ ಅಪರಿಚಿತ ಸ್ಥಳಕ್ಕೆ ಹೋದಾಗ ಅಪಾಯವಿದೆ ಎಂದು ನಿಮಗೆ ಅನ್ನಿಸಿದೆಯಾ? ಪ್ರಯಾಣದ ವೇಳೆ ಸಹ ಪ್ರಯಾಣಿಕರು ಕಿರುಕುಳ ಕೊಡುತ್ತಿದ್ದಾರೆ ಅನ್ನೋದು ಮನವರಿಕೆಯಾದರೆ ಕೂಡಲೇ ಪ್ಯಾನಿಕ್ ಬಟನ್ ಒತ್ತಿದರೆ ಸಾಕು ನೀವು ಕಳುಹಿಸಬೇಕಾದ ವ್ಯಕ್ತಿಗಳಿಗೆ ಅಲರ್ಟ್ ಸಂದೇಶ ರವಾನೆಯಾಗುವಂತಹ ನೂತನ ಅಪ್ಲಿಕೇಶನ್​ವೊಂದನ್ನು ಕಾಲೇಜು ವಿದ್ಯಾರ್ಥಿನಿಯೊಬ್ಬರು ಅಭಿವೃದ್ಧಿ ಪಡಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಟೆಕ್​ ಸಮ್ಮಿಟ್​ನಲ್ಲಿ ಕೆ.ಆರ್‌. ಪುರ ಸಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಆಯೇಷಾ ಸರ್ವತ್ 'ವುಮೆನ್ ಸೇಫ್ಟಿ' ಅಪ್ಲಿಕೇಶನ್ ಸಾಫ್ಟ್​​ವೇರ್‌ ಸಿದ್ಧಪಡಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಪುರುಷರಿಗೆ ಸರಿಸಮನಾಗಿ ಮಹಿಳೆಯರು ಬೆಳೆದು ನಿಂತಿದ್ದಾರೆ. ಮನೆ ಕಾಯಕದ ಜೊತೆಗೆ ಮನೆಯಿಂದಾಚೆಗೂ ಸಹ ದುಡಿಯುತ್ತಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ಕಚೇರಿ ಕೆಲಸ ಮುಗಿಸಿಕೊಂಡು ತಡರಾತ್ರಿ ಬರಬೇಕಾದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರದಂತೆ ಕೃತ್ಯಗಳು ನಡೆದಿರುವ ನಿದರ್ಶನಗಳು ಇವೆ.

ಅಲ್ಲದೆ, ಒಂಟಿಯಾಗಿ ಕ್ಯಾಬ್​ನಲ್ಲಿ ಸಂಚರಿಸುವಾಗ ಆತಂಕ ಇದ್ದೇ ಇರಲಿದೆ. ಹೀಗಾಗಿ ರೆಡ್ ಝೋನ್ ಪ್ರದೇಶಗಳಲ್ಲಿ ಅಥವಾ ಅಪರಿಚಿತ ಸ್ಥಳಗಳಲ್ಲಿ ಓಡಾಡುವಾಗ ಈ ಅಪ್ಲಿಕೇಶನ್​ ಮಹಿಳೆಯರ ನೆರವಿಗೆ ಬರಲಿದೆ. ಅಪಾಯದಲ್ಲಿ ಸಿಲುಕಿರುವುದು ಗೊತ್ತಾದರೆ ಕೂಡಲೇ ಪ್ಯಾನಿಕ್​ ಬಟನ್ ಒತ್ತಿದರೆ ಸೈರನ್ ಮೊಳಗಲಿದೆ. ಜೊತೆಗೆ ನಿಮ್ಮ ಕಾಂಟ್ಯಾಕ್ಟ್ ಲಿಸ್ಟ್​ನಲ್ಲಿರುವ ಯಾರಿಗಾದರೂ ಕಳುಹಿಸಿದರೆ ಕೂಡಲೇ 'ಐಯಮ್ ಇನ್ ಟ್ರಬಲ್' ಎಂದು ಲೊಕೇಶನ್‌ ಸಹಿತ ಸಂದೇಶ ರವಾನೆಯಾಗಲಿದೆ ಎಂದು ಈಟಿವಿ ಭಾರತಕ್ಕೆ ಆಯೇಷಾ ತಿಳಿಸಿದ್ದಾರೆ.

ಇಂಟರ್​ನೆಟ್, ವೈಫೈ, ಜಿಪಿಎಸ್ ಅಗತ್ಯವಿಲ್ಲ; ಸಾರ್ವಜನಿಕ‌‌ ಪ್ರದೇಶಗಳಲ್ಲಿ ಅಪಾಯ ಎದುರಾಗುವ ಸಂದರ್ಭ ಬಂದರೆ ಕೂಡಲೇ ಮೊಬೈಲ್​ನಲ್ಲಿ ಅಳವಡಿಸಿಕೊಂಡಿರುವ ವುಮೆನ್ ಸೇಫ್ಟಿ ಅಪ್ಲಿಕೇಶನ್​ನಲ್ಲಿ ಪ್ಯಾನಿಕ್​ ಬಟನ್ ಒತ್ತಿದರೆ ಅಲಾರಂ ರೀತಿ ಸೈರನ್ ಮೊಳಗಲಿದೆ.‌ ಈ ಮೂಲಕ ಸುತ್ತಮುತ್ತಲಿನಲ್ಲಿರುವವರ ಗಮನ ಸೆಳೆದು ನೆರವು ಪಡೆಯಹುದು.‌ ಎರಡನೇಯದಾಗಿ ನಿರ್ಜನ ಪ್ರದೇಶಗಳಲ್ಲಿ ಅಥವಾ ಒಂಟಿಯಾಗಿ ಪ್ರಯಾಣ ಮಾಡುವಾಗ ನಿಮ್ಮ ಮೊಬೈಲ್​ನಲ್ಲಿರುವ ಸಂಪರ್ಕಿತರ ನಂಬರ್​ಗಳಿಗೆ ಸಂದೇಶ ಕಳುಹಿಸಬಹುದಾಗಿದೆ.‌

ಇದಕ್ಕೆ‌ ಯಾವುದೇ ಇಂಟರ್​ನೆಟ್, ವೈಫೈ ಹಾಗೂ ಜಿಪಿಎಸ್‌ ಸಹಾಯದ ಅಗತ್ಯವಿಲ್ಲ. ಆ್ಯಂಡ್ರಾಯ್ಡ್ ಮೊಬೈಲ್ ಇರುವವರು ಮಾತ್ರ ಅಪ್ಲಿಕೇಶನ್ ನಿಂದ ನೆರವು ಪಡೆಯಬಹುದು. ಪ್ರಾಯೋಗಿಕ ಹಂತವಾಗಿ ಕಾಲೇಜಿನಲ್ಲಿ‌ ಮಹಿಳಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಈಗಾಗಲೇ ಈ ಅಪ್ಲಿಕೇಶನ್ ಬಳಸುತ್ತಿದ್ದಾರೆ. ಏಕಕಾಲದಲ್ಲಿ 150 ಮಂದಿಗೆ ಅಲರ್ಟ್ ಮೆಸ್ಸೇಜ್ ಕಳುಹಿಸಬಹುದಾಗಿದೆ. ಹೆಚ್ಚಿನ ಸಾಮರ್ಥ್ಯ ಕಲ್ಪಿಸಲು ಕ್ಲೌಡ್ ಖರೀದಿಸಬೇಕಿದೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿಯಿಂದ ಉತ್ತಮ ಬೆಂಬಲ ದೊರೆತಿದೆ ಎನ್ನುತ್ತಾರೆ ಆಯೇಷಾ.

ಇದನ್ನೂ ಓದಿ: ಟೆಕ್‌ ಸಮಿಟ್‌ನಲ್ಲಿ ವಿವಿಧ ಸ್ಟಾರ್ಟ್‌ಅಪ್‌ಗಳ 35 ವಿನೂತನ ಉತ್ಪನ್ನಗಳ ಅನಾವರಣ

Last Updated : Nov 30, 2023, 11:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.