ETV Bharat / state

ಟೆರೇಸ್‌ ಮೇಲೆ‌ ರಾಷ್ಟ್ರ ಧ್ವಜ ಕಟ್ಟುವಾಗ ಆಯತಪ್ಪಿ ಬಿದ್ದು ಟೆಕ್ಕಿ ಸಾವು - ಈಟಿವಿ ಭಾರತ್ ಕನ್ನಡ ನ್ಯೂಸ್

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆ ಮನೆ ಮೇಲೆ ತಿರಂಗಾ ಧ್ವಜ ಕಟ್ಟುವ ವೇಳೆ ಆಯತಪ್ಪಿ ಬಿದ್ದು ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ.

a-man-fell-down-and-died-while-hoisting-the-national-flag-on-the-terrace
ಟೆರೇಸ್‌ ಮೇಲೆ‌ ರಾಷ್ಟ್ರ ಧ್ವಜ ಕಟ್ಟುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
author img

By

Published : Aug 15, 2022, 1:40 PM IST

ಬೆಂಗಳೂರು : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮೇಲೆ ತ್ರಿವರ್ಣ ಧ್ವಜ ಕಟ್ಟುತ್ತಿದ್ದ ವೇಳೆ ಸಾಫ್ಟ್​ವೇರ್​ ಇಂಜಿನಿಯರ್​ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಹೆಚ್ ಬಿಆರ್ ಲೇಔಟ್ ನಲ್ಲಿ ಸಂಭವಿಸಿದೆ. ಮೃತರನ್ನು ವಿಶುಕುಮಾರ್ (33) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವಿಶುಕುಮಾರ್ ವೃತ್ತಿಯಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದರು. ಭಾನುವಾರ ಮಧ್ಯಾಹ್ನ 1.45 ಸುಮಾರಿಗೆ ತ್ರಿವರ್ಣ ಧ್ವಜ ಕಟ್ಟಲು ಎರಡನೇ ಮಹಡಿಯಲ್ಲಿನ ಮನೆ ಟೆರೇಸ್​ ಮೇಲೆ ಏರಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರು. ಬಿದ್ದ ರಭಸಕ್ಕೆ ವಿಶುಕುಮಾರ್ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರು ಹೆಂಡತಿ ಹಾಗೂ 2 ವರ್ಷದ ಮಗುವನ್ನು ಅಗಲಿದ್ದಾರೆ. ಮಗನ ಸಾವಿನ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಓದಿ : ಧ್ವಜಾರೋಹಣ ವೇಳೆ ಕುಸಿದು ಬಿದ್ದು ಮಾಜಿ ಸೈನಿಕ ಸಾವು... ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.