ETV Bharat / state

ಪಾರಿವಾಳ ಹಿಡಿಯಲು ಹೋಗಿ 4ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ಸಾವು - A young man fell down from building and dead in Bangalore

ವಿದ್ಯಾರ್ಥಿಯಾಗಿದ್ದ ಉಮರ್ ಕೊರೊನಾ ಬಿಕ್ಕಟ್ಟಿನಿಂದ ಭೂಪಸಂದ್ರ ಮನೆಯೊಂದರಲ್ಲಿ ಉಳಿದುಕೊಂಡಿದ್ದ. ಮನೆ ಬಳಿ ಪಾರಿವಾಳ ಸಾಕುವ ವಿಪರೀತ ಹುಚ್ಚು ಬೆಳೆಸಿಕೊಂಡಿದ್ದ. ರಾತ್ರಿ ವೇಳೆ ಅಪಾರ್ಟ್​ಮೆಂಟ್​ವೊಂದಕ್ಕೆ ಪಾರಿವಾಳ ಹಿಡಿಯಲು ಹೋಗಿ ನಾಲ್ಕನೇ‌ ಮಹಡಿಯಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.

A young man fell down from building and dead in Bangalore
ಪಾರಿವಾಳ ಹಿಡಿಯಲು ಹೋಗಿ ಆಯತಪ್ಪಿ ಬಿದ್ದು ಯುವಕ ಸಾವು
author img

By

Published : Aug 10, 2021, 5:08 PM IST

ಬೆಂಗಳೂರು: ರಾತ್ರಿ ವೇಳೆ ಅಪಾರ್ಟ್​ಮೆಂಟ್​ವೊಂದಕ್ಕೆ ಪಾರಿವಾಳ ಹಿಡಿಯಲು ಹೋಗಿ ನಾಲ್ಕನೇ‌ ಮಹಡಿಯಿಂದ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಸಂಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.‌

19 ವರ್ಷದ ಉಮರ್ ಫಾರೂಕ್ ಪ್ರಾಣ ಕಳೆದುಕೊಂಡ ಯುವಕ. ವಿದ್ಯಾರ್ಥಿಯಾಗಿದ್ದ ಉಮರ್ ಕೊರೊನಾ ಬಿಕ್ಕಟ್ಟಿನಿಂದ ಭೂಪಸಂದ್ರ ಮನೆಯೊಂದರಲ್ಲಿ ಉಳಿದುಕೊಂಡಿದ್ದ. ಮನೆ ಬಳಿ ಪಾರಿವಾಳ ಸಾಕುವ ವಿಪರೀತ ಹುಚ್ಚು ಬೆಳೆಸಿಕೊಂಡಿದ್ದ. ಮನೆ ಬಳಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪಾರಿವಾಳ ಬರುತ್ತಿದ್ದವು. ಇದನ್ನು ಮನಗಂಡು ಹೇಗಾದರೂ ಮಾಡಿ ಪಾರಿವಾಳ ಹಿಡಿಯುವ ಹಪಾಹಪಿಗೆ ಉಮರ್ ಮುಂದಾಗಿದ್ದ.

A young man fell down from building and dead in Bangalore
ಪಾರಿವಾಳ ಹಿಡಿಯಲು ಹೋಗಿ ಆಯತಪ್ಪಿ ಬಿದ್ದು ಯುವಕ ಸಾವು

ಇದರಂತೆ ನಿನ್ನೆ ರಾತ್ರಿ ಸ್ನೇಹಿತರಿಗೆ ಪಾರಿವಾಳ ಹಿಡಿದುಕೊಂಡು ಬರುವುದಾಗಿ ಹೇಳಿ ಅಪಾರ್ಟ್​ಮೆಂಟ್ ಪಕ್ಕದಲ್ಲಿರುವ ಬೃಂದಾವನ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಹತ್ತಿದ್ದಾನೆ. ಅಲ್ಲಿಂದ‌ ಪಕ್ಕದಲ್ಲಿರುವ ಅಪಾರ್ಟ್​ಮೆಂಟ್​ಗೆ ಹತ್ತುವಾಗ ಕಾಲು ಜಾರಿ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ಬಂದು‌ ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಿ, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.