ETV Bharat / state

10ನೇ‌ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡ ಬಾಲಕಿ - ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಬೆಂಗಳೂರಿನ ಚಾಲುಕ್ಯ ಸರ್ಕಲ್‌ನ ಹೆಚ್ ಪಿ ಅಪಾರ್ಟ್​ಮೆಂಟ್​ನ 10ನೇ ಮಹಡಿಯಿಂದ ಕೆಳಗೆ ಜಿಗಿದು ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರಿನ ಚಾಲುಕ್ಯ ಸರ್ಕಲ್‌ನ ಹೆಚ್ ಪಿ ಅಪಾರ್ಟ್​ಮೆಂಟ್

author img

By

Published : Feb 27, 2023, 6:07 AM IST

Updated : Feb 27, 2023, 1:32 PM IST

ಬಾಲಕಿ ಸಾವು ಪ್ರಕರಣದ ಬಗ್ಗೆ ಡಿಸಿಪಿ ಮಾಹಿತಿ

ಬೆಂಗಳೂರು: ಅಪಾರ್ಟ್​ಮೆಂಟ್​​ನ 10ನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಬಾಲಕಿಯು ಸಂಜಯ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಚಾಲುಕ್ಯ ಸರ್ಕಲ್‌ನ ಹೆಚ್​ಪಿ ಅಪಾರ್ಟ್​ಮೆಂಟ್​ನ 10ನೇ ಮಹಡಿಯಿಂದ ಕೆಳಗಿದ್ದ ಪಾರ್ಕಿಂಗ್​ನಲ್ಲಿದ್ದ ಕಾರಿನ ಮೇಲೆ ಯುವತಿ ಬಿದ್ದಿದ್ದಾಳೆ. ಬಿದ್ದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಜೀವ ಕಳೆದುಕೊಂಡಿದ್ದಾಳೆ. ಮೃತಳ ತಂದೆ ಅರವಿಂದ್ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದು, ತಾಯಿ ತೇಜು ಕೌಶಿಕ್‌ ಗೃಹಿಣಿಯಾಗಿದ್ದಾರೆ.

ದಂಪತಿ‌ ಸಂಜಯ್‌ ನಗರದಲ್ಲಿ ವಾಸವಿದ್ದಾರೆ. ಬಾಲಕಿಯು ಸಮೀಪದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ನಿರ್ಧರಿಸಿಕೊಂಡಂತಿದ್ದ ಬಾಲಕಿ ಭಾನುವಾರ ಅಪಾರ್ಟ್​ಮೆಂಟ್ ಸುತ್ತಮುತ್ತಲೇ ಓಡಾಡುತ್ತಿದ್ದಳು ಎನ್ನಲಾಗಿದೆ. ಕಟ್ಟಡದಿಂದ ಜಿಗಿಯುವ ಮುನ್ನ ಪಕ್ಕದ ಇನ್ನೊಂದು ಅಪಾರ್ಟ್​ಮೆಂಟ್​ ಒಳ ಹೋಗುವುದಕ್ಕೆ ಪ್ರಯತ್ನ ಮಾಡಿದ್ದಳು ಎಂಬುದಾಗಿಯೂ ತಿಳಿದು ಬಂದಿದೆ.

ಆದರೆ, ಅಲ್ಲಿ ಸೆಕ್ಯೂರಿಟಿ ಒಳಬಿಟ್ಟಿರಲಿಲ್ಲವಂತೆ. ಆತಂಕದಿಂದಲೇ ಪೋನ್​ನಲ್ಲಿ ‌ಮಾತನಾಡುತ್ತ ಹೇಗೊ ಅಪಾರ್ಟ್​ಮೆಂಟ್ ಒಳನುಗ್ಗಿ‌ 10ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾಳೆ. ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿಪಿ ಪ್ರತಿಕ್ರಿಯೆ: ''ಬಹುಮಹಡಿ ಕಟ್ಟಡದ 10ನೇ‌ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮಾನಸಿಕ ಖಿನ್ನತೆ ಕಾರಣವೆಂದು ಗೊತ್ತಾಗಿದೆ. ಬಾಲಕಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಓದಿನಲ್ಲಿ ಎಲ್ಲರಿಗಿಂತ ಮುಂದಿದ್ದಳು. ಕೆಲ‌ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದು, ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಇದೇ ಕಾರಣಕ್ಕೆ ಪೋಷಕರು ವೈದ್ಯರ ಬಳಿ ಕೌನ್ಸಿಲಿಂಗ್ ಮಾಡಿಸಿದ್ದರು. ಆದರೂ ಸಹ ಭಾನುವಾರ ಸಂಜೆ ಕಾಲೇಜಿನ ಪಕ್ಕದಲ್ಲಿರುವ ಅಪಾರ್ಟ್​ಮೆಂಟ್​ಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಘಟನೆ ಬಗ್ಗೆ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ'' ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ತಿಳಿಸಿದ್ದಾರೆ.

ಓದಿ : ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಗರ್ಭಿಣಿ ಸೇರಿ ಒಂದೇ ಕುಟುಂಬದ ನಾಲ್ವರು ಬಲಿ!

ಒಂದೇ ಕುಟುಂಬದ ನಾಲ್ವರು ಮೃತ: ಇನ್ನೊಂದೆಡೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಲೋಕೇಶ್​ ಆಚಾರಿ, ಪತ್ನಿ ಲಕ್ಷ್ಮಿ, ಮಕ್ಕಳಾದ ಲೇಖನ ಮತ್ತು ಗಾನವಿ ಮೃತರು ಎಂದು ಗುರುತಿಸಲಾಗಿದೆ. ಅತಿ ವೇಗ ಮತ್ತು ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದ ಸವಾರ, ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಅಸುನೀಗಿದ್ದಾರೆ ಎಂಬುದು ತಿಳಿದು ಬಂದಿದೆ.

ಚನ್ನರಾಯಪಟ್ಟಣ ತಾಲೂಕಿನ ನವಿಲೇ ಗೇಟ್ ಗ್ರಾಮದ ಲೋಕೇಶ್ ಆಚಾರಿ 12 ವರ್ಷದ ಹಿಂದೆ ಲಕ್ಷ್ಮಿ ಎಂಬುವರನ್ನು ಮದುವೆಯಾಗಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಈ ಕಾರಣಕ್ಕೆ ತನ್ನ ತಂಗಿಯ ಇಬ್ಬರು ಹೆಣ್ಣು ಮಕ್ಕಳಾದ ಗಾನವಿ ಮತ್ತು ಲೇಖನಳನ್ನು ಕರೆದುಕೊಂಡು ಬಂದು ತಾವೇ ಸಾಕುತ್ತಿದ್ದರು. ಅಕ್ಕಪಕ್ಕದ ದೇವಸ್ಥಾನಗಳನ್ನು ಸುತ್ತಿ ನೂರಾರು ಹರಕೆ ಕಟ್ಟಿಕೊಂಡ ಬಳಿಕ ಕಳೆದ ಮೂರು ತಿಂಗಳ ಹಿಂದಷ್ಟೇ ಪತ್ನಿ ಲಕ್ಷ್ಮಿ ಗರ್ಭ ಧರಿಸಿದ್ದರು. ಹಾಗಾಗಿ, ಮನೆಯಲ್ಲಿ ಸಂಭ್ರಮ ನೆಲೆಸಿತ್ತು.

ಅಪಘಾತಕ್ಕೂ ಮುನ್ನ ದೊಡ್ಡಮ್ಮನನ್ನು ನೋಡಬೇಕು ಅಂತ ಮಕ್ಕಳು ಕೇಳಿದ್ದಕ್ಕೆ ಇಡೀ ಕುಟುಂಬ ಸಮೇತ ಬಿ ಹೊಸೂರು ಗ್ರಾಮಕ್ಕೆ ಹೋಗಿ, ರಾತ್ರಿ ಊಟ ಮುಗಿಸಿ ಬೈಕ್​ನಲ್ಲಿ ವಾಪಸ್ ಊರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ರೂಪದ ಯಮಸ್ವರೂಪಿಗೆ ದಂಪತಿ ಸೇರಿದಂತೆ ತನ್ನ ತಂಗಿಯ ಮಕ್ಕಳು ಬಲಿಯಾಗಿದ್ದು, ಗರ್ಭದಲ್ಲಿದ್ದ ಕೂಸು ಕೂಡ ಪ್ರಾಣ ಕಳೆದುಕೊಂಡಿದೆ.

ಬೈಕ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನುಗ್ಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನೆ ಮಾಡಿದ್ದಾರೆ. ಯಾವುದೇ ಸೂಚನಾ ಫಲಕ ಹಾಕದೇ ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಟ್ರ್ಯಾಕ್ಟರ್ ಚಾಲಕ ಮತ್ತು ಮಾಲೀಕನ ವಿರುದ್ಧ ಮೃತರ ಸಂಬಂಧಿಕರು ನುಗ್ಗೆಹಳ್ಳಿ ಪೊಲೀಸ್ ಠಾಣೆ ದೂರು ನೀಡಿದ್ದಾರೆ.

Last Updated : Feb 27, 2023, 1:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.