ETV Bharat / state

ಕೈಕೊಟ್ಟ ಯುವಕನಿಗಾಗಿ ಪ್ರಾಣಬಿಟ್ಟ ಯುವತಿ.. ಬೆಂಗಳೂರಿನಲ್ಲಿ ನಡೆಯಿತು ದುರಂತ ಪ್ರೇಮಕಥೆ! - ಪ್ರೇಮ ವೈಫಲ್ಯ ಸುದ್ದಿ

ಪ್ರೇಮ ವೈಫಲ್ಯದಿಂದಾಗಿ ಯವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

young woman committed suicide over love fail, young woman committed suicide in Bangalore, Love fail news, Bangalore crime news,  ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆಗೆ ಶರಣು, ಬೆಂಗಳೂರಿನಲ್ಲಿ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆಗೆ ಶರಣು, ಪ್ರೇಮ ವೈಫಲ್ಯ ಸುದ್ದಿ, ಬೆಂಗಳೂರು ಅಪರಾಧ ಸುದ್ದಿ,
ಪ್ರೀತಿಸಿ ಕೈಕೊಟ್ಟ ಪ್ರಿಯಕರ
author img

By

Published : Jan 24, 2022, 7:47 AM IST

Updated : Jan 24, 2022, 7:57 AM IST

ಬೆಂಗಳೂರು: ಪ್ರೀತಿಸಿದ ಪ್ರಿಯಕರ ಕೈಕೊಟ್ಟಿದ್ದಕ್ಕೆ ಪ್ರೇಯಸಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಜುನಾಥನಗರದ ನಿವಾಸಿ ಚಂದನಾ (23) ಮೃತ ಯುವತಿ. ಘಟನೆ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಕೆಯ ಪ್ರಿಯಕರ ನಾಗರಾಜು (23) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಓದಿ: ಈ ಹಿಂದೆ ಮಾಡಿದ ತಪ್ಪುಗಳನ್ನು ಈಗ ಸರಿಪಡಿಸಲಾಗುತ್ತಿದೆ: ಪ್ರಧಾನಿ ಮೋದಿ

ನಾಗರಾಜು ಮತ್ತು ಚಂದನಾ ಬಾಗಲಗುಂಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಸ್ವಾಬ್ ಸಂಗ್ರಹ ಮಾಡುವ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೇಮಾಂಕುರವಾಗಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿಯ ವಿಚಾರವನ್ನು ಚಂದನಾ ಪೋಷಕರಿಗೂ ತಿಳಿಸಿದ್ದರು.

ಈ ಮಧ್ಯೆ ಕೆಲ ತಿಂಗಳ ಹಿಂದೆ ಇಬ್ಬರ ನಡುವೆ ಬಿರುಕು ಉಂಟಾಗಿದೆ. ಹೀಗಾಗಿ ನಾಗರಾಜ್ ಪ್ರಿಯತಮೆಯನ್ನು ಮಾತನಾಡಿಸುತ್ತಿರಲಿಲ್ಲ. ಆದ್ದರಿಂದ ನೊಂದ ಚಂದನಾ ಶನಿವಾರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಸಂಬಂಧ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ನಾಗರಾಜುನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 24, 2022, 7:57 AM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.