ಬೆಂಗಳೂರು : ನಾಪತ್ತೆಯಾಗಿದ್ದ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಮಹಾದೇವಪುರ ಠಾಣಾ ವ್ಯಾಪ್ತಿಯ ಮಹೇಶ್ವರಿ ನಗರದಲ್ಲಿ ನಡೆದಿದೆ. ಮಹಾನಂದ (21) ಎಂಬಾಕೆಯ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಳಿಯೇ ಮೃತದೇಹ ಪತ್ತೆಯಾಗಿದೆ.
ಕಲಬುರಗಿ ಮೂಲದ ಮಹಾನಂದ ಹಾಗೂ ಆಕೆಯ ಅಕ್ಕ ಕಳೆದ ಮೂರು ವರ್ಷಗಳಿಂದ ಮಹಾದೇವಪುರ ಠಾಣಾ ವ್ಯಾಪ್ತಿಯ ಮಹೇಶ್ವರಿ ಲೇಔಟ್ನಲ್ಲಿ ವಾಸವಿದ್ದು, ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ತಡರಾತ್ರಿ ಮಹಾದೇವಪುರ ಠಾಣೆಗೆ ಬಂದಿದ್ದ ಮಹಾನಂದಳ ಅಕ್ಕ, ತಂಗಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಆದರೆ, ಬೆಳಗ್ಗೆ ಐದು ಗಂಟೆ ಸುಮಾರಿಗೆ ಮನೆ ಮುಂದೆಯೇ ಮಹಾನಂದಳ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಎಸ್.ಗಿರೀಶ್, ಮಹದೇವಪುರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಅಸಹಜ ಸಾವು ಎಂಬುದು ತಿಳಿದು ಬಂದಿದೆ. ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ, ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂದು ಕಂಡು ಬಂದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಗಿರೀಶ್, "ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಸಾಕ್ಷಿಗಳು ಲಭ್ಯವಾಗಿಲ್ಲ. ಹಾಗಾಗಿ, ಸೆಕ್ಷನ್ 302 ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇದನ್ನೂ ಓದಿ : ರಾಯಚೂರು : ನಿರ್ಜನ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆ.. ಕೊಲೆ ಶಂಕೆ
ಮಹಿಳೆ ಶವ ಪತ್ತೆ : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಕಳೆದ ಮೂರು ದಿನಗಳ ಹಿಂದೆ (ಆಗಸ್ಟ್ 8) ರಂದು ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಜವಳಗೇರಾ ಗ್ರಾಮದ ಹತ್ತಿರ ಜಾನೇಕಲ್ ಎನ್ನುವರ ಹೊಲದಲ್ಲಿ ಮೃತದೇಹ ಕಂಡುಬಂದಿದ್ದು, ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವರು ಎಂದು ಅಂದಾಜಿಸಲಾಗಿತ್ತು. ರಾತ್ರಿ ವೇಳೆ ಮೃತದೇಹವನ್ನು ಎಸೆದು ಹೋಗಿದ್ದು, ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದರು. ಹಾಗೆಯೇ, ಮಹಿಳೆಯ ಮುಖ, ಗುರುತು ಪತ್ತೆಯಾಗದಂತೆ ಕೆಮಿಕಲ್ ಬಳಸಿರಬಹುದು ಅಥವಾ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ.
ಇದನ್ನೂ ಓದಿ : Assam crime : ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ: ಅತ್ಯಾಚಾರ ಶಂಕೆ
ಇಬ್ಬರು ಯುವತಿಯರ ಶವ ಪತ್ತೆ : ಇನ್ನೊಂದೆಡೆ, ಆಗಸ್ಟ್ 6 ರಂದು ಇಬ್ಬರು ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಈಶಾನ್ಯ ರಾಜ್ಯ ಅಸ್ಸಾಂನ ಕಾಮ್ರೂಪ್ ಜಿಲ್ಲೆಯಲ್ಲಿ ನಡೆದಿತ್ತು. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
ಇದನ್ನೂ ಓದಿ : ಮಾರಕಾಸ್ತ್ರಗಳಿಂದ ಕೊಚ್ಚಿ ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ.. ಆ ಮರ್ಡರ್ ಬಗ್ಗೆ ಡಿಸಿಪಿ ಹೇಳಿದ್ದು ಹೀಗೆ!