ETV Bharat / state

ರಾಜ್ಯ ಗುತ್ತಿಗೆ ಕಾಮಗಾರಿಗಳ ಶೇ 40ರಷ್ಟು ಮೊತ್ತ ರಾಜಕಾರಣಿಗಳ ಪಾಲು: ಆಮ್​​ ಆದ್ಮಿ ಪಾರ್ಟಿ - ಬೆಂಗಳೂರಿನಲ್ಲಿ ಆಮ್‌ ಆದ್ಮಿ ಪಾರ್ಟಿಯಿಂದ ಬೃಹತ್‌ ಪ್ರತಿಭಟನೆ

ಬೇರೆ ಪಕ್ಷದ ಆಡಳಿತವಿದ್ದಾಗ ಕರ್ನಾಟಕ ಸರ್ಕಾರವನ್ನು ಶೇ 10 ಕಮಿಷನ್ ಸರಕಾರವೆಂದು ಕರೆದಿದ್ದ ಮೋದಿ ಈಗ ಶೇ 40 ರಷ್ಟು ಬಿಜೆಪಿ ಟ್ಯಾಕ್ಸ್‌ ಸಂಗ್ರಹವಾಗುತ್ತಿರುವುದನ್ನು ಗುತ್ತಿಗೆದಾರರೇ ಬಹಿರಂಗಪಡಿಸಿದಾಗಲೂ ಸುಮ್ಮನಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಿ ಪ್ರತಿಕ್ರಿಯಿಸಬೇಕು ಎಂದು ಜಗದೀಶ್‌ ವಿ. ಸದಂ ಆಗ್ರಹಿಸಿದರು.

ಬೆಂಗಳೂರಿನಲ್ಲಿ ನವೆಂಬರ್‌ 24ರಂದು ಆಮ್‌ ಆದ್ಮಿ ಪಾರ್ಟಿಯಿಂದ ಬೃಹತ್‌ ಪ್ರತಿಭಟನೆ

author img

By

Published : Nov 22, 2021, 8:55 PM IST

ಬೆಂಗಳೂರು: ಗುತ್ತಿಗೆ ಕಾಮಗಾರಿಗಳ ಶೇ 40ರಷ್ಟು ಮೊತ್ತ ರಾಜಕಾರಣಿಗಳ ಪಾಲಾಗುತ್ತಿರುವುದರ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ನವೆಂಬರ್‌ 24ರಂದು ಬೃಹತ್‌ ಪ್ರತಿಭಟನೆ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್‌ ವಿ. ಸದಂ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ರಾಜ್ಯದ ಜನಪ್ರತಿನಿಧಿಗಳ ಮುಖವಾಡ ಕಳಚಿದ್ದಾರೆ. ಯಾವುದೇ ರಾಜಕಾರಣಿ ಅಥವಾ ವಿರೋಧ ಪಕ್ಷದವರಲ್ಲದ ಕೆಂಪಣ್ಣ ಲಿಖಿತ ರೂಪದಲ್ಲಿ ಮಾಡಿರುವ ಆರೋಪವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಿದೆ.

ಬೇರೆ ಪಕ್ಷದ ಆಡಳಿತವಿದ್ದಾಗ ಕರ್ನಾಟಕ ಸರ್ಕಾರವನ್ನು ಶೇ 10 ಕಮಿಷನ್ ಸರಕಾರವೆಂದ ಕರೆದಿದ್ದ ಮೋದಿ ಈಗ ಶೇ 40ರಷ್ಟು ಬಿಜೆಪಿ ಟ್ಯಾಕ್ಸ್‌ ಸಂಗ್ರಹವಾಗುತ್ತಿರುವುದನ್ನು ಗುತ್ತಿಗೆದಾರರೇ ಬಹಿರಂಗಪಡಿಸಿದಾಗಲೂ ಸುಮ್ಮನಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಿ ಪ್ರತಿಕ್ರಿಯಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಕಾಮಗಾರಿಗಳಿಗೆ ಸರ್ಕಾರದ ಬೊಕ್ಕಸದಿಂದ ಸಾವಿರಾರು ಕೋಟಿ ಖರ್ಚಾಗುತ್ತಿದ್ದರೂ, ರಾಜ್ಯವು ಅಭಿವೃದ್ಧಿಯಾಗದಿರುವುದಕ್ಕೆ ಗುತ್ತಿಗೆಯಲ್ಲಿ ಪರ್ಸೆಂಟ್‌ ಲೆಕ್ಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವೇ ಕಾರಣ. ಇದರಿಂದಾಗಿ ಕೇವಲ ಜನಪ್ರತಿನಿಧಿಗಳು ಶ್ರೀಮಂತರಾಗಿ, ತೆರಿಗೆ ಕಟ್ಟಿದ ಸಾಮಾನ್ಯರು ತೊಂದರೆಗಳನ್ನು ಅನುಭವಿಸುತ್ತಲೇ ಬದುಕಬೇಕಾಗಿದೆ.

ರಾಜ್ಯಕ್ಕೆ ಶಾಪವಾಗಿರುವ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಗುತ್ತಿಗೆ ಭ್ರಷ್ಟಾಚಾರದ ಬಗ್ಗೆ ಪರಸ್ಪರ ಹೊಂದಾಣಿಕೆ ಮಾಡಿಕೊಂಡಿವೆ. ಆದ್ದರಿಂದಲೇ ಡಿ. ಕೆಂಪಣ್ಣ ಪತ್ರವು ಸಂಚಲನ ಸೃಷ್ಟಿಸಿದ್ದರೂ ಮೂರು ಪಕ್ಷಗಳ ರಾಜಕಾರಣಿಗಳು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ಭ್ರಷ್ಟ ವ್ಯವಸ್ಥೆಯಲ್ಲಿ ಮೂರೂ ಪಕ್ಷಗಳು ಭಾಗಿಯಾಗಿರುವುದು ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ಜಗದೀಶ್‌ ವಿ. ಸದಂ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಮಾತನಾಡಿ, “ಗುತ್ತಿಗೆ ಕಾಮಗಾರಿಗಳ ಮೊತ್ತದಲ್ಲಿ ಸಚಿವರಿಗೆ ಶೇ 5 ರಷ್ಟು ಸಂಸದರಿಗೆ ಶೇ 2 ರಷ್ಟು ಸ್ಥಳೀಯ ಜನಪ್ರತಿನಿಧಿಗಳಿಗೆ ಶೇ 10 ರಷ್ಟು ಬಿಲ್‌ ಪಾವತಿಸುವ ಅಧಿಕಾರಿಗಳಿಗೆ ಶೇ 6 ರಷ್ಟು ಹೀಗೆ ಶೇ 40ರಷ್ಟು ಹಣವು ಅಕ್ರಮವಾಗಿ ಜನಪ್ರತಿನಿಧಿಗಳ ಜೇಬು ಸೇರುತ್ತಿರುವುದನ್ನು ಡಿ ಕೆಂಪಣ್ಣ ಪತ್ರದಲ್ಲಿ ಬಹಿರಂಗಪಡಿಸಿದ್ದಾರೆ.

ಈ ಪತ್ರದಲ್ಲಿ ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು. ಕಳೆದ ಹತ್ತು ವರ್ಷಗಳಲ್ಲಿ ಯಾವ್ಯಾವ ಕಾಮಗಾರಿಗಳಲ್ಲಿ ಎಷ್ಟೆಷ್ಟು ಮೊತ್ತ ಯಾವ್ಯಾವ ರಾಜಕಾರಣಿಯ ಜೇಬು ಸೇರಿದೆ ಎಂಬುದು ತನಿಖೆ ನಡೆದರಷ್ಟೇ ಬಯಲಾಗಲಿದೆ ಎಂದು ಹೇಳಿದರು.

ಪಕ್ಷದ ಹಿರಿಯ ಮುಖಂಡರಾದ ಗುರುಮೂರ್ತಿ ಮಾತನಾಡಿ, ಕೆಲವೇ ವರ್ಷಗಳಲ್ಲಿ ತಮ್ಮ ಆಸ್ತಿಪಾಸ್ತಿಗಳನ್ನು ಅನೇಕ ಪಟ್ಟು ಹೆಚ್ಚಿಸಿಕೊಂಡಿರುವ ಜನಪ್ರತಿನಿಧಿಗಳ ಆಸ್ತಿ ಗಳಿಕೆಯ ಮೂಲದ ಕುರಿತು ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿ ನವೆಂಬರ್‌ 24ರ ಬುಧವಾರದಂದು ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬೆಳಗ್ಗೆ 11 ಗಂಟೆಗೆ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಪಕ್ಷದ ಮುಖಂಡರು, ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.