ETV Bharat / state

ಬೆಂಗಳೂರು: ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಎಎಪಿ ಆಟೋ ಚಾಲಕರ ಘಟಕ ಪ್ರತಿಭಟನೆ - ಎಎಪಿ ಆಟೋ ಚಾಲಕರ ಘಟಕ ಪ್ರತಿಭಟನೆ

ಮೈಸೂರು ಬ್ಯಾಕ್‌ ವೃತ್ತದಲ್ಲಿ ಆಮ್‌ ಆದ್ಮಿ ಪಾರ್ಟಿಯ ಆಟೋ ಚಾಲಕರ ಘಟಕವು ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿತು.

ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಎಎಪಿ ಆಟೋ ಚಾಲಕರ ಘಟಕ ಪ್ರತಿಭಟನೆ

author img

By

Published : Nov 9, 2021, 8:37 PM IST

ಬೆಂಗಳೂರು: ಆಟೋ ರಿಕ್ಷಾಗಳಿಗೆ ಬಳಸುವ ಎಲ್‌ಪಿಜಿ ಬೆಲೆಯು ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಪಟ್ಟು ಏರಿಕೆಯಾಗಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯ ಆಟೋ ಚಾಲಕರ ಘಟಕವು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ಆಟೋ ಘಟಕದ ಅಧ್ಯಕ್ಷ ವೆಂಕಟೇಗೌಡ, ಪದೇ ಪದೆ ಎಲ್‌ಪಿಜಿ ಬೆಲೆ ಏರಿಕೆ ಮಾಡುವ ಕೇಂದ್ರ ಸರ್ಕಾರವು, ಆಟೋ ಚಾಲಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಲೀಟರ್‌ಗೆ 38 ರೂಪಾಯಿದ್ದ ಎಲ್‌ಪಿಜಿ ಬೆಲೆ ಈಗ 66 ರೂಪಾಯಿ ತಲುಪಿದೆ.

ಕೇವಲ ಒಂದು ವರ್ಷದಲ್ಲಿ 28 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಒಂದೇ ಸಲ 6 ರೂಪಾಯಿ ಹೆಚ್ಚಿಸಲಾಗಿದೆ. ಪ್ರಯಾಣಿಕರು ನೀಡುವ ಹಣವು ಎಲ್‌ಪಿಜಿಗೇ ಖರ್ಚಾಗುತ್ತಿದ್ದು, ಆದಾಯವಿಲ್ಲದೇ ಚಾಲಕರ ಬದುಕು ದುಸ್ತರವಾಗಿದೆ. ಆಟೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್‌ಪಿಜಿ ಪೂರೈಸುವ ಕಂಪನಿಗಳ ಉದ್ಯಮಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ. ಈ ಸರ್ಕಾರಕ್ಕೆ ಆಟೋ ಚಾಲಕರು ಹಾಗೂ ಪ್ರಯಾಣಿಕರ ಹಿತ ಬೇಕಾಗಿಲ್ಲ. ಉದ್ಯಮಿಗಳು ಕೊಡುವ ಹಣದ ಆಸೆಗಾಗಿ ಸಾಮಾನ್ಯ ಜನರ ಜೀವನವನ್ನು ಶೋಚನೀಯ ಸ್ಥಿತಿಗೆ ತಳ್ಳಲಾಗುತ್ತಿದೆ. ಉಳ್ಳವರ ಪರವಾಗಿರುವ ಈ ಸರ್ಕಾರವನ್ನು ಆಡಳಿತದಿಂದ ಕಿತ್ತೊಗೆಯುವವರೆಗೂ ಜನಸಾಮಾನ್ಯರಿಗೆ ನೆಮ್ಮದಿ ಎಂಬುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಆಟೋ ಚಾಲಕರ ಸಂಘದ ಸದಸ್ಯ ಹರೀಶ್ ಮಾತನಾಡಿ, ಎಲ್‌ಪಿಜಿ ಬೆಲೆಯನ್ನು ಮನಸೋ ಇಚ್ಛೆ ಹೆಚ್ಚಿಸುತ್ತಿರುವ ನರೇಂದ್ರ ಮೋದಿ ಸರ್ಕಾರವು ದೇಶ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ. ಸರ್ಕಾರಕ್ಕೆ ಆಟೋ ಚಾಲಕರ ಬಗ್ಗೆ ಕಾಳಜಿಯಿದ್ದರೆ ಈಗಲಾದರೂ ಬೆಲೆ ಇಳಿಕೆ ಮಾಡಲಿ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.