ETV Bharat / state

ಬೆಂಗಳೂರು ಟ್ರಾಫಿಕ್‌ ನಿಯಂತ್ರಣಕ್ಕೆ ದೆಹಲಿ ಮಾದರಿ ಪ್ರೀಮಿಯಂ ಬಸ್‌ ಸಂಚಾರ ಆರಂಭಿಸಿ: ಎಎಪಿ - Delhi model premium bus service

ಬೆಂಗಳೂರು ಟ್ರಾಫಿಕ್‌ ನಿಯಂತ್ರಣಕ್ಕೆ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ ಸಂಚಾರ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಎಎಪಿ ಆಗ್ರಹಿಸಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
author img

By ETV Bharat Karnataka Team

Published : Oct 27, 2023, 5:29 PM IST

ಬೆಂಗಳೂರು: ದಿನದಿನಕ್ಕೆ ಹೆಚ್ಚಾಗುತ್ತಿರುವ ಟ್ರಾಫಿಕ್‌ ಹಾಗೂ ಮಾಲಿನ್ಯ ನಿಯಂತ್ರಣದ ದೃಷ್ಟಿಯಲ್ಲಿ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸಂಚಾರವನ್ನು ಬೆಂಗಳೂರಿನಲ್ಲೂ ಆರಂಭಿಸುವಂತೆ ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಪತ್ರ ಬರೆದಿರುವ ಕರ್ನಾಟಕದ ಆಪ್ ಹಿರಿಯ ನಾಯಕ ಜಗದೀಶ್ ವಿ.ಸದಂ ಅವರು, ದೆಹಲಿ ಈ ಮಾದರಿಯನ್ನು ಬೆಂಗಳೂರಿನಂತಹ ನಗರಗಳಲ್ಲಿ ಪ್ರಾರಂಭಿಸಬೇಕೆಂದು ಪಕ್ಷದ ಪರವಾಗಿ ವಿನಂತಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸರ್ಕಾರವು ಪ್ರೀಮಿಯಂ ಬಸ್‌ ಅಗ್ರಿಗೇಟರ್‌ ಪಾಲಿಸಿ 2023ಗೆ ಅನುಮೋದನೆ ನೀಡಿದೆ. ಈ ಮೂಲಕ ಬಡತನ ರೇಖೆಗಿಂತ ಮೇಲಿರುವ ಮಧ್ಯಮ ವರ್ಗ ಹಾಗೂ ಶ್ರೀಮಂತ ವರ್ಗದವರನ್ನು ಬಸ್‌ಗಳಲ್ಲಿ ಸಂಚರಿಸುವಂತೆ ಉತ್ತೇಜನ ನೀಡುವ ಸಲುವಾಗಿ ಆ್ಯಪ್‌ ಆಧಾರಿತ ಆನ್‌ಲೈನ್‌ ಬಸ್‌ ಸೇವೆ ಯೋಜನೆಯನ್ನು ಆರಂಭಿಸಲಾಗಿದೆ. ಇ-ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ರಾಜ್ಯಪಾಲರ ಅನುಮೋದನೆ ಸಿಗುತ್ತಿದ್ದಂತೆ ಪ್ರೀಮಿಯಂ ಬಸ್‌ ಸೇವೆಗೆ ಚಾಲನೆ ಸಿಗಲಿದೆ.

ಬಡವರು ಮತ್ತು ಬಡ ಮಧ್ಯಮ ವರ್ಗದವರು ಬಸ್‌ಗಳಲ್ಲಿ ಸಂಚರಿಸುತ್ತಾರೆ. ಹಾಗೆಯೇ ಮಧ್ಯಮ ವರ್ಗದವರು ಮತ್ತು ಶ್ರೀಮಂತ ವರ್ಗದವರು ತಮ್ಮ ಖಾಸಗಿ ವಾಹನಗಳನ್ನು ಬಿಟ್ಟು ಬಸ್‌ಗಳಲ್ಲೇ ದಿನನಿತ್ಯ ಓಡುವಂತೆ ಉತ್ತೇಜನ ನೀಡುವ ಸಲುವಾಗಿ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸೇವೆಯನ್ನು ನಗರಗಳಲ್ಲಿ ಆರಂಭಿಸಬೇಕು ಅವರು ಒತ್ತಾಯಿಸಿದ್ದಾರೆ.

ಎಸಿ, ವೈಫೈ, ಜಿಪಿಎಸ್‌, ಸಿಸಿಟಿವಿ ಸೇರಿದಂತೆ ಲಕ್ಸೂರಿ ಖಾಸಗಿ ವಾಹನಗಳಲ್ಲಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಒಳಗೊಂಡ ಆಧುನಿಕ ಬಸ್‌ಗಳು ಸಂಚಾರ ಆರಂಭಿಸಿದರೆ ಸ್ವಂತ ಕಾರುಗಳನ್ನು ಬಿಟ್ಟು ಬಸ್‌ಗಳಲ್ಲೇ ಸಂಚರಿಸಲು ಆರಂಭಿಸುತ್ತಾರೆ. ಈ ಮೂಲಕ ಸಂಚಾರ ದಟ್ಟಣೆ, ವಾಯು ಮಾಲಿನ್ಯದಂತಹ ಪ್ರಮುಖ ಸಮಸ್ಯೆಗಳನ್ನು ಹತೋಟಿಗೆ ತರಬಹುದು. ಪ್ರೀಮಿಯಂ ಬಸ್‌ಗಳಲ್ಲಿ ಆನ್‌ಲೈನ್‌ ಮೂಲಕ ಸೀಟ್‌ ಕಾಯ್ದಿರಿಸುವುದು ಹಾಗೂ ಪೇಮೆಂಟ್‌ ಮಾಡುವ ಅವಕಾಶವಿದೆ. ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ. ಎಲ್ಲರಿಗೂ ಆಸನದ ಸಿಗಲಿದೆ. ಬಸ್‌ ಒಳಗೆ ಟಿಕೆಟ್‌ ಹರಿಯುವ ಸಂಪ್ರದಾಯ ಇರುವುದಿಲ್ಲ. ನೂಕುನುಗ್ಗಲು, ಅನವಶ್ಯಕ ಗದ್ದಲ ಇರುವುದಿಲ್ಲ. ಸ್ವಂತ ಗಾಡಿಯಲ್ಲಿ ಆರಾಮದಾಯಕವಾಗಿ, ಅನುಕೂಲಕರವಾಗಿ ಪ್ರಯಾಣಿಸಿದಂತೆ ದಿನನಿತ್ಯ ಓಡಾಡಬಹುದು ಎಂದು ವಿವರಿಸಿದ್ದಾರೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು 190 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಕೊರೆಯಲು ಡಿಸಿಎಂ ಡಿಕೆ ಶಿವಕುಮಾರ್‌ ಮುಂದಾಗಿದ್ದಾರೆ. ಇಂತಹ ಅಪಾಯಕಾರಿ ಮತ್ತು ಅವೈಜ್ಞಾನಿಕ ಯೋಜನೆಗಳಿಗೆ ಕೈಹಾಕುವ ಬದಲು ದೆಹಲಿ ಸರ್ಕಾರದ ಕ್ರಾಂತಿಕಾರಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವುದು ಉತ್ತಮ ಎಂದಿದ್ದಾರೆ.

ದಕ್ಷ ಅಧಿಕಾರಿಗಳನ್ನು ನೇಮಿಸಿ: ಬೆಂಗಳೂರು ನಗರದ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆಯನ್ನು ನಿರ್ವಹಿಸಲು ಹೊಸದಾಗಿ ಸೃಷ್ಟಿಸಿದ್ದ ಬೆಂಗಳೂರು ವಿಶೇಷ ಟ್ರಾಫಿಕ್ ಕಮಿಷನರ್ ಹುದ್ದೆಯನ್ನು ಮರು ಸ್ಥಾಪಿಸಬೇಕು ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದ ಎಡಿಜಿಪಿ, ವಿಶೇಷ ಕಮಿಷನರ್‌ ಎಂ.ಎ.ಸಲೀಂ ಅವರನ್ನು ಪುನಃ ಮುಂದುವರಿಸಬೇಕು ಅಥವಾ ಅವರಂತಹ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಜಗದೀಶ್‌ ವಿ ಸದಂ ಇದೇ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ: ಜನರ ನಿರೀಕ್ಷೆಗೆ ತಕ್ಕಂತೆ 'ಬ್ರ್ಯಾಂಡ್ ಬೆಂಗಳೂರು' ಯೋಜನೆಯಲ್ಲಿ ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.